Just In
Don't Miss
- Movies
ಸಲಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಸ್ಟಾರ್ ನಟ: ವಿಲನ್ ಪಾತ್ರದಲ್ಲಿ ಖ್ಯಾತ ಹೀರೋ?
- Finance
ಭಾರತದಲ್ಲಿ ಮತ್ತೊಂದು ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್; ಎಷ್ಟು ದರ?
- News
ಬೆಂಗಳೂರಿಗಾಗಿ ಹೊಸ ಮಾಸ್ಟರ್ಪ್ಲ್ಯಾನ್ ಸಿದ್ಧಪಡಿಸುತ್ತಿರುವ ಬಿಡಿಎ
- Sports
ಸ್ಟೀವ್ ಸ್ಮಿತ್ ಮತ್ತೆ ನಾಯಕನಾಗುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ ಇಯಾನ್ ಚಾಪೆಲ್
- Automobiles
ಜನರ ಅಸೂಯೆಗೆ ಬಲಿಪಶುವಾದ ಸೂಪರ್ ಬೈಕ್ ಸವಾರ
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವೋ Y51 (2020) ಸ್ಮಾರ್ಟ್ಫೋನ್ ಅನಾವರಣ; ಫೀಚರ್ಸ್ ಏನು?
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿದೆ. ಹಲವು ಹೊಸ ಮಾದರಿಯ ಸ್ಮಾರ್ಟ್ಫೋನ್ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ವಿವೋ ಇದೀಗ ವಿವೋ Y51 (2020) ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ.
ಹೌದು, ಜನಪ್ರಿಯ ವಿವೋ ಸ್ಮಾರ್ಟ್ಫೋನ್ ಕಂಪೆನಿ ತನ್ನ ಹೊಸ ವಿವೋ Y51 (2020) ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಡಿಸ್ಪ್ಲೇ ರಚನೆ
ವಿವೋ Y51 (2020) ಸ್ಮಾರ್ಟ್ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್ಪ್ಲೇಯು ಪಂಚ್ಹೋಲ್ ವಿನ್ಯಾಸವನ್ನ ಹೊಂದಿರಲಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ.
ಪ್ರೊಸೆಸರ್ ಕಾರ್ಯ
ವಿವೋ Y51 (2020) ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.
ಕ್ಯಾಮೆರಾ ವಿನ್ಯಾಸ
ವಿವೋ Y51 (2020) ಸ್ಮಾರ್ಟ್ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಹೊಂದಿದೆ. ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ನಲ್ಲಿದೆ. ಹಾಗೆಯೇ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಬ್ಯಾಟರಿ ಮತ್ತು ಇತರೆ
ವಿವೋ Y51 (2020) ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ನಲ್ಲಿ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಬೆಲೆ ಮತ್ತು ಲಭ್ಯತೆ
ಇಂಡೋನೇಶಿಯಾದಲ್ಲಿ ವಿವೋ Y51 ಸ್ಮಾರ್ಟ್ಫೋನ್ ಬೆಲೆಯು IDR 3,599,000 (ಭಾರತದಲ್ಲಿ ಅಂದಾಜು 18,800ರೂ. ಎನ್ನಲಾಗಿದೆ). ಭಾರತದಲ್ಲಿ ಯಾವಾಗ ಲಗ್ಗೆ ಇಡಲಿದೆ ಎನ್ನುವ ಬಗ್ಗೆ ಮಾಹಿತಿ ಹೊರಹಾಕಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190