Home
ಸುದ್ದಿಜಾಲ

ಭಾರತದಲ್ಲಿ ವಿವೊ Y51 (2020) ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ವಿವೋ ಇದೀಗ ತನ್ನ ವಿವೋ Y51 (2020) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ವಿವೊ Y51 (2020) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದೆ.

ವಿವೋ

ಹೌದು, ವಿವೋ ತನ್ನ ಹೊಸ ವಿವೋ Y51(2020) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB RAM+128GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ವಿವೊ Y 51 (2020) ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್‌-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 82.2% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದ್ದು, 21:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y51 (2020) ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಎಫ್ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹೆಚ್ಚುವರಿ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಸ್ಲೋ-ಮೋಷನ್ ರೆಕಾರ್ಡಿಂಗ್, ಸೂಪರ್ ನೈಟ್ ಮೋಡ್, ಲೈವ್ ಫೋಟೋ, ಎಐ 48-ಎಂಪಿ ಮೋಡ್ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಯುಎಸ್‌ಬಿ ಟೈಪ್-ಸಿ, ಜಿಪಿಎಸ್, ಯುಎಸ್‌ಬಿ ಒಟಿಜಿ, ಎಫ್ಎಂ ರೇಡಿಯೋ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y 51 (2020) ಸ್ಮಾರ್ಟ್‌ಫೋನ್‌ ಭಾರತದಲ್ಲಿ 17,990 ರೂ. ಬೆಲೆಯನ್ನು ಹೊಂದಿದೆ. ಇದು ಟೈಟಾನಿಯಂ ಶಪೈರ್‌ ಮತ್ತು ಕ್ರಿಸ್ಟಲ್ ಸಿಂಫನಿ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇಂದಿನಿಂದ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಲಭ್ಯವಾಗಲಿದೆ.

Best Mobiles in India

English summary
Vivo Y51 (2020) has launched in India as the latest smartphone offering from the company.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+