ಭಾರತದಲ್ಲಿ ವಿವೋ Y51A ಸ್ಮಾರ್ಟ್‌ಫೋನ್ ಬಿಡುಗಡೆ!..ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ಹೊಸದಾಗಿ ವಿವೋ Y51A ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಹೊಸ ವಿವೋ Y51A ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮೊಬೈಲ್ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಹಾಗೆಯೇ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ರಿಯರ್ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗಾದರೇ ವಿವೋ Y51A ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ವಿವೋ Y51A ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್ ವಿನ್ಯಾಸವನ್ನ ಹೊಂದಿರಲಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ವಿವೋ Y51A ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y51A ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಹೊಂದಿದೆ. ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y51A ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y51A ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 17,990ರೂ.ಗಳು ಆಗಿದೆ. ಟೈಟಾನಿಯಂ ಶೀಫರ್ ಹಾಗೂ ಕ್ರಿಸ್ಟಲ್ ಸಿಂಫನಿ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ವಿವೋ ಇಂಡಿಯಾ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾಕ್ಲಿಕ್, ಮತ್ತು ಎಲ್ಲಾ ರೀಟೈಲ್ ಸ್ಟೋರ್‌ಗಳಲ್ಲಿ ಲಭ್ಯ.


Click it and Unblock the Notifications