Home
ಸುದ್ದಿಜಾಲ

ವಿವೋ ಸಂಸ್ಥೆಯಿಂದ ವಿವೋ Y51s ಸ್ಮಾರ್ಟ್‌ಫೋನ್‌ ಬಿಡುಗಡೆ!

ಟೆಕ್‌ ವಲಯದಲ್ಲಿ ಪ್ರತಿನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಆಗುತ್ತಲೇ ಇರುತ್ತೆ. ಟೆಕ್ನಾಲಜಿ ಆಪ್ಡೇಟ್‌ ಆದಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನ ಸೆಳೆಯುತ್ತಲೇ ಇವೆ. ಸದ್ಯ ಈಗಾಗಲೇ ಹಲವು ಕಂಪೆನಿಗಳು ತಮ್ಮ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿವೆ. ಇವುಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದ್ದು, ಇದೀಗ ತನ್ನ ವಿವೋ Y51s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ವಿವೋ Y51s

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ವಿವೋ ತನ್ನ ವಿವೋ Y51s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ವಿವೋ Y51s ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 880 ಆಕ್ಟಾ-ಕೋರ್ ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y51s ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90.72% ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 394ppi ಪಿಕ್ಸೆಲ್‌ ಸಾಂದ್ರತೆಯನ್ನು ಸಹ ಒಳಗೊಂಡಿದೆ. ಇನ್ನು ವೀಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ವಿವೋ Y51s ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 880 ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಡ್ರಾಯ್ಡ್ 10 ಫಂಟೌಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ವಿವೋ Y51s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌,ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಕ್ಯಾಮೆರಾ ಮೋಡ್‌ಗಳಲ್ಲಿ ನೈಟ್‌ ವ್ಯೂವ್‌, ಇಮೇಜ್‌,ದೃಶ್ಯಾವಳಿ, ಡೈನಾಮಿಕ್ ಫೋಟೋ, ಸ್ಲೋ ಮೋಷನ್‌, ಫೀಚರ್ಸ್‌ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 18W ಡ್ಯುಯಲ್-ಎಂಜಿನ್ ಫ್ಲ್ಯಾಷ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್, GPS, ಮೈಕ್ರೋ-USB ಪೋರ್ಟ್ ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದ್ದು, ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y51s ಸ್ಮಾರ್ಟ್‌ಫೊನ್‌ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ ಸಿಎನ್‌ವೈ 1,798 (ಸುಮಾರು ರೂ. 19,100)ಆಗಿದೆ. ಇದು ಸೀಕ್ರೆಟ್ ರಿಯಲ್ಮ್ ಬ್ಲ್ಯಾಕ್, ಸ್ನೋ ಫೆದರ್ ವೈಟ್ ಮತ್ತು ಬಿಹೈಲನ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

Best Mobiles in India

English summary
Vivo Y51s has quietly launched in China as the latest smartphone offering from the company.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+