ವಿವೋ Y52 5G (2022) ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ವಿವೋ ಕಂಪೆನಿ ಹೊಸ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ Y52 5G (2022) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y52 5G (2022) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡಾರ್ಕ್ ನೈಟ್ ಮತ್ತು ಗ್ಲೇಸಿಯರ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y52 5G (2022) ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 96% NTSC ಕಲರ್ ಗ್ಯಾಮಟ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್-ಟು-ಬಾಡಿ 90.6% ಅನುಪಾತವನ್ನು ಹೊಂದಿದೆ. ಇದು ಟಿಯರ್ ಡಾಪ್ ನಾಚ್ ಶೈಲಿಯ ಡಿಸ್‌ಪ್ಲೇ ಆಗಿದೆ.

ಪ್ರೊಸೆಸರ್ ಹೇಗಿದೆ?
ವಿವೋ Y52 5G (2022) ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಕೂಡ ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ವಿವೋ Y52 5G (2022) ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಎಲ್‌ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y52 5G (2022) ಸ್ಮಾರ್ಟ್‌ಫೋನ್ 18W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್ ಡ್ಯುಯಲ್ ಸಿಮ್, 5ಜಿ, ವೈ-ಫೈ, ಬ್ಲೂಟೂತ್ 5.1, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಆಕ್ಸಿಲೇರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y52 5G (2022) ಸ್ಮಾರ್ಟ್‌ಫೋನ್ ಪ್ರಸ್ತುತ ತೈವಾನ್ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ತೈವಾನ್ ಮಾರುಕಟ್ಟೆಯಲ್ಲಿ ಇದರ ಬೆಲೆ TWD 7,990 (ಅಂದಾಜು 20,492ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಡಾರ್ಕ್ ನೈಟ್ ಮತ್ತು ಗ್ಲೇಸಿಯರ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇನ್ನು ವಿವೋ ಕಂಪೆನಿ ಈ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಯಾವಾಗ ಬಿಡುಗಡೆ ಮಾಡಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.


Click it and Unblock the Notifications








