ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18M ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ v5.1, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿವೆ. ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಮತ್ತು ಫೇಸ್ ಅನ್ಲಾಕ್ ಫೀಚರ್ಸ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y52s (T1 ಆವೃತ್ತಿ) ಸ್ಮಾರ್ಟ್‌ಫೋನ್ 8GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ CNY 2,099 (ಅಂದಾಜು 23,900 ರೂ.) ಬೆಲೆಯನ್ನು ಹೊಂದಿದೆ. ಇದು ಕೋರಲ್ ಸೀ, ಮೊನೆಟ್ ಮತ್ತು ಟೈಟಾನಿಯಂ ಗ್ರೇ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ವಿವೋ ಚೀನಾ ಆನ್‌ಲೈನ್ ಸ್ಟೋರ್ ಮತ್ತು ಜೆಡಿ ಡಾಟ್ ಕಾಮ್ ನಲ್ಲಿ ಈ ಫೋನ್ ಕಾಣಿಸಿಕೊಂಡಿದೆ.


Click it and Unblock the Notifications








