ವಿವೋ Y52t ಸ್ಮಾರ್ಟ್‌ಫೋನ್ ಲಾಂಚ್! ಪೀಚರ್ಸ್ ಏನಿದೆ?
ವಿವೋ ಕಂಪೆನಿಯ ಸ್ಮಾರ್ಟ್ಫೋನ್‌ಗಳಿಗೆ ಟೆಕ್ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ತನ್ನ ಆಕರ್ಷಕ ವಿನ್ಯಾಸ ಹಾಗೂ ಕ್ಯಾಮೆರಾ ಫೀಚರ್ಸ್‌ಗಳಿಗೆ ವಿವೋ ಕಂಪೆನಿ ಪ್ರಸಿದ್ಧಿ ಪಡೆದಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್ ಪ್ರಿಯರು ವಿವೋ ಕಂಪೆನಿಯ ಫೋನ್‌ಗಳನ್ನು ಆಯ್ಕೆ ಮಾಡಲು ಬಯಸುತ್ತಾರೆ. ಸದ್ಯ ಇದೀಗ ವಿವೋ ಕಂಪೆನಿ ತನ್ನ ಹೊಸ ವಿವೋ Y52t 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y52t 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು 60Hz LCD ಡಿಸ್‌ಪ್ಲೇ ಮತ್ತು ವಾಟರ್‌ಡ್ರಾಪ್ ನಾಚ್ ಶೈಲಿಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y52t ಸ್ಮಾರ್ಟ್‌ಫೋನ್ 6.56 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1600x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 600ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಈ ಡಿಸ್‌ಪ್ಲೇ ವೀಡಿಯೋ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ವಿವೋ Y52t ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12-ಆಧಾರಿತ ಮೂಲ ಓಎಸ್ ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೊರೇಜ್ ಅನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ವಿವೋ Y52t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಪೋರ್ಟ್ ಬೆಂಬಲಿಸಲಿದೆ. ಇದು ಬಯೋಮೆಟ್ರಿಕ್ಸ್‌ಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಹೊದಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y52t ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯ ಬೆಲೆ CNY 1,299 (ಅಂದಾಜು 14,900ರೂ)ಆಗಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಹೊಂದಿರುವ ರೂಪಾಂತರದ ಬೆಲೆ CNY 1,499 (ಸುಮಾರು 17,000ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಐಸ್ ಲೇಕ್ ಬ್ಲೂ, ಕೋಕಾನೆಟ್ ಪೀಚ್ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಸೆಪ್ಟೆಂಬರ್ 19 ರಿಂದ ಚೀನಾದಲ್ಲಿ ವಿವೋದ ಅಧಿಕೃತ ಸ್ಟೋರ್ ಮತ್ತು ಇತರ ಆನ್‌ಲೈನ್ ಚಿಲ್ಲರೆ ವ್ಯಾಪಾರಿಗಳಿಂದ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








