ವಿವೋ Y53s NFC ಸ್ಮಾರ್ಟ್‌ಫೋನ್ ಬಿಡುಗಡೆ! 5,000mAh ಬ್ಯಾಟರಿ!
ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ Y53s ಎನ್‌ಎಫ್‌ಸಿ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಸೆಲ್ಫಿ ಕ್ಯಾಮೆರಾಗೆ ಒಂದು ನಾಚ್‌ನೊಂದಿಗೆ ಬರಲಿದೆ. ಜೊತೆಗೆ ಈ ಫೋನ್ ಸಿಂಗಲ್ RAM + ಶೇಖರಣಾ ಸಂರಚನೆ ಮತ್ತು ಎರಡು ಬಣ್ಣ ಆಯ್ಕೆಗಳಲ್ಲಿ ನೀಡಲಾಗುತ್ತದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y53s NFC ಸ್ಮಾರ್ಟ್‌ಫೋನ್ ಅನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು 6.58-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪ್ರೊಸೆಸರ್
ವಿವೋ Y53s NFC ಸ್ಮಾರ್ಟ್‌ಫೋನ್ ಮಿಡಿಯಾ ಟೆಕ್ ಹಿಲಿಯೊ G80 ಚಿಪ್‌ಸೆಟ್ ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಫಂಟೌಚೋಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM + 128GB ಹಾಗೂ 3GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y53s NFC ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y53s NFC ಸ್ಮಾರ್ಟ್‌ಫೋನ್ 8GB RAM + 128GB ಶೇಖರಣಾ ಮಾದರಿಗೆ ಐಡಿಆರ್ 3,699,000 (ಸುಮಾರು 19,000ರೂ.) ಬೆಲೆಯಿದೆ. ಈ ಸ್ಮಾರ್ಟ್‌ಫೋನ್ ಜುಲೈ 27 ರವರೆಗೆ ಪೂರ್ವ-ಆದೇಶಗಳಿಗಾಗಿ ಫೋನ್ ಅನ್ನು ಈಗಾಗಲೇ ಜೆಡಿ.ಕಾಂನಲ್ಲಿ ಪಟ್ಟಿ ಮಾಡಲಾಗಿದೆ. ಇದನ್ನು ಇಂಡೋನೇಷ್ಯಾದ ಡೀಪ್ ಸೀ ಬ್ಲೂ ಮತ್ತು ಫೆಂಟಾಸ್ಟಿಕ್ ರೇನ್ಬೋ ಬಣ್ಣಗಳಲ್ಲಿ ನೀಡಲಾಗುವುದು.


Click it and Unblock the Notifications








