Home
ಸುದ್ದಿಜಾಲ

ಭಾರತದಲ್ಲಿ ವಿವೋ Y53s ಸ್ಮಾರ್ಟ್‌ಫೋನ್‌ ಬಿಡುಗಡೆ! 33W ಫಾಸ್ಟ್ ಚಾರ್ಜಿಂಗ್ ಬೆಂಬಲ!

ವಿವೋ ಕಂಪೆನಿ ತನ್ನ ಹೊಸ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ಹೊಸ ಕ್ಯಾಮೆರಾ ವಿನ್ಯಾಸ ಒಳಗೊಂಡ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ವಿವೋ ಇದೀಗ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಸದ್ಯ ಭಾರತದಲ್ಲಿ ಹೊಸ ವಿವೋ ವಿವೋ Y53s ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ಡಿಸ್ಪ್ಲೇ ನೋಚ್ ಒಳಗೊಂಡಿದೆ.

ವಿವೋ Y53s ಸ್ಮಾರ್ಟ್‌ಫೋನ್‌

ಹೌದು, ವಿವೋ ಕಂಪೆನಿ ಹೊಸ ವಿವೋ Y53s ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.58-ಇಂಚಿನ ಫುಲ್-ಹೆಚ್‌ಡಿ+‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G80SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 19,490 ರೂ,ಆಗಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ವಿವೋ Y53s ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ವಿವೋ Y53s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G80SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟಚ್ ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಅಲ್ಲದೆ ವಿವೋ 3GB ಯ 'ವಿಸ್ತೃತ RAM' ಅನ್ನು ಸಹ ಒದಗಿಸಿದೆ. ಇದು ಮಲ್ಟಿಫಂಕ್ಷನ್‌ಗಾಗಿ ಅಂತರ್ಗತ ಸಂಗ್ರಹಣೆಯನ್ನು ಬಳಸುತ್ತದೆ. ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y53s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.0, GPS/ A-GPS, ಮತ್ತು ಯುಎಸ್‌ಬಿ ಟೈಫ್‌-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ Y53s ಬೆಲೆ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,490.ರೂ ಆಗಿದೆ. ಈ ಸ್ಮಾರ್ಟ್‌ಫೋನ್ ಡೀಪ್ ಸೀ ಬ್ಲೂ ಮತ್ತು ಫೆಂಟಾಸ್ಟಿಕ್ ರೇನ್ಬೋ ಬಣ್ಣಗಳಲ್ಲಿ ಬರುತ್ತದೆ. ಇದು ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾಕ್ಲಿಕ್, ಬಜಾಜ್ ಇಎಂಐ ಸ್ಟೋರ್ ಮತ್ತು ವಿವೋ ಇಂಡಿಯಾ ಇ-ಸ್ಟೋರ್ ಹಾಗೂ ಎಲ್ಲಾ ಪ್ರಮುಖ ರಿಟೇಲ್ ಮಳಿಗೆಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇದಲ್ಲದೆ ಲಾಂಚ್ ಆಫರ್‌ನಲ್ಲಿ HDFC ಬ್ಯಾಂಕ್ ಡೆಬಿಟ್/ ಕ್ರೆಡಿಟ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳು, ICICI ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಬಜಾಜ್ ಫಿನ್‌ಸರ್ವ್ ಮೂಲಕ 1,500 ಕ್ಯಾಶ್‌ಬ್ಯಾಕ್ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
New Vivo phone comes with triple rear cameras and a waterdrop-style display notch.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+