Home
ಸುದ್ದಿಜಾಲ

ವಿವೋ Y53s ಸ್ಮಾರ್ಟ್‌ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ ಹೈಲೈಟ್!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಸಂಸ್ಥೆ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ಹೊಸದಾಗಿ ವಿವೋ Y53s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಅಧಿಕ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಆಕರ್ಷಕ ಎನಿಸಿಕೊಂಡಿದೆ.

ಕಂಪೆನಿ

ಹೌದು, ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ವಿವೋ Y53s ಸ್ಮಾರ್ಟ್‌ಫೋನ್‌ ಅನ್ನು ಚೀನಾದ ಮೊಬೈಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಹಾಗಾದರೇ ವಿವೋ Y53s ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗೆ

ಡಿಸ್‌ಪ್ಲೇ ರಚನೆ ಹೇಗೆ

ವಿವೋ Y53s ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನ ಹೊಂದಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಸ್ಕ್ರೀನ್ 90Hz ರೀಫ್ರೇಶ್ ರೇಟ್ ಹೊಂದಿದೆ. 163.95x75.3x8.5mm ಸುತ್ತಳತೆ ಪಡೆದಿದ್ದು, 189 ಗ್ರಾಂ ತೂಕವನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯ ಏನು

ಪ್ರೊಸೆಸರ್‌ ಕಾರ್ಯ ಏನು

ವಿವೋ Y53s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ವಿವೋ Y53s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ ಮತ್ತು ತೃತೀಯ ಕ್ಯಾಮೆರಾ ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y53s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y53s ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು ಚೀನಾದಲ್ಲಿ VND 6,990,000 (ಭಾರತದಲ್ಲಿ 22,700) ಆಗಿದೆ. 8GB RAM + 128GB ವೇರಿಯಂಟ್ ಬೆಲೆಯು CNY 1,999 (ಭಾರತದಲ್ಲಿ ಅಂದಾಜು 22,800ರೂ.) ಎನ್ನಲಾಗಿದೆ. ಇನ್ನು ಈ ಫೋನ್ ಕಪ್ಪು ಹಸಿರು ಮತ್ತು ನೀಲಿ ನೇರಳೆ ಬಣ್ಣಗಳಲ್ಲಿ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Y53s is backed by the same 5,000mAh battery as its 5G variant, but the new 4G variant supports faster 33W charging.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+