ವಿವೋ Y55s 5G ಸ್ಮಾರ್ಟ್‌ಫೋನ್‌ ಅನಾವರಣ; ಇಲ್ಲಿದೆ ಬೆಲೆ, ಫೀಚರ್ಸ್‌ ವಿವರ!

|

ಸ್ಮಾರ್ಟ್‌ ಗ್ಯಾಜೆಟ್‌ ವಿಭಾಗದಲ್ಲಿ ಈಗಾಗಲೇ ಹಲವಾರು ಬ್ರ್ಯಾಂಡ್‌ಗಳು ವಿಭಿನ್ನ ರೀತಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಅದರಲ್ಲೂ ವಿವೋ ಅಗ್ಗದ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದರ ನಡುವೆ ಈಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲಾಗಿದ್ದು, ಈ ಫೋನ್‌
50 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ವಿವೋ Y55s 5G ಸ್ಮಾರ್ಟ್‌ಫೋನ್‌ ಅನಾವರಣ; ಇಲ್ಲಿದೆ ಬೆಲೆ, ಫೀಚರ್ಸ್‌ ವಿವರ!

ಹೌದು, ವಿವೋ ಸಂಸ್ಥೆಯು ವಿವೋ Y55s 5G (Vivo Y55s 5G Smartphone) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅದರಂತೆ 2021 ರಲ್ಲಿ ಚೀನಾದಲ್ಲಿ ಬಿಡುಗಡೆಯಾದ ಮೂಲ ವಿವೋ Y55s 5G ಸಹ ಡೈಮೆನ್ಸಿಟಿ 700 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಇದರ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ವಿವರಿಸಿದ್ದೇವೆ ಓದಿರಿ.

ಡಿಸ್‌ಪ್ಲೇ ವಿವರ
ವಿವೋ Y55s 5G (2023) ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದ್ದು, ಇದು 2,408 x 1,080 ಪಿಕ್ಸೆಲ್‌ ರೆಸಲ್ಯೂಶನ್‌ ಪಡೆದುಕೊಂಡಿದೆ. ಹಾಗೆಯೇ 60Hz ರಿಫ್ರೆಶ್ ರೇಟ್‌ ಜೊತೆಗೆ 90.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ವಿವೋ Y55s 5G ಸ್ಮಾರ್ಟ್‌ಫೋನ್‌ ಅನಾವರಣ; ಇಲ್ಲಿದೆ ಬೆಲೆ, ಫೀಚರ್ಸ್‌ ವಿವರ!

ಪ್ರೊಸೆಸರ್‌ ಯಾವುದು?
ಈ ಹೊಸ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 12 ಅನ್ನು ಆಧರಿಸಿದ ಫನ್‌ಟಚ್ ಓಎಸ್‌ 12 ಅನ್ನು ರನ್ ಮಾಡುತ್ತದೆ. ಇದರೊಂದಿಗೆ 6GB RAM ಹಾಗೂ 128GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದುಕೊಂಡಿದೆ. ಹಾಗೆಯೇ ಸ್ಟೋರೇಜ್ ವಿಸ್ತರಣೆಗಾಗಿ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಅನ್ನು ಸಹ ನೀಡಲಾಗಿದೆ.

ಕ್ಯಾಮೆರಾ ರಚನೆ
ಕ್ಯಾಮೆರಾ ವಿಚಾರದಲ್ಲಿ ಈ ಹೊಸ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, f/1.8 ಅಪರ್ಚರ್ ಲೆನ್ಸ್‌ನೊಂದಿಗೆ 50 ಮೆಗಾಪಿಕ್ಸೆಲ್‌ ಪ್ರಾಥಮಿಕ ಸೆನ್ಸರ್‌, f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಹಾಗೂ f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ f/1.8 ಅಪರ್ಚರ್ ಲೆನ್ಸ್‌ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ರಚನೆ ಪಡೆದುಕೊಂಡಿದೆ.

ಬ್ಯಾಟರಿ ಹಾಗೂ ಇತರೆ
ಯುಎಸ್‌ಬಿ ಟೈಪ್-ಸಿ ಪೋರ್ಟ್ ಆಯ್ಕೆಯೊಂದಿಗೆ 18W ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಕನೆಕ್ಟಿವಿಟಿ ವಿಚಾರದಲ್ಲಿ 5G,ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.1, ಎನ್‌ಎಫ್‌ಸಿ, ಜಿಪಿಎಸ್‌, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಪಡೆದುಕೊಂಡಿದೆ.

ವಿವೋ Y55s 5G ಸ್ಮಾರ್ಟ್‌ಫೋನ್‌ ಅನಾವರಣ; ಇಲ್ಲಿದೆ ಬೆಲೆ, ಫೀಚರ್ಸ್‌ ವಿವರ!

ಬೆಲೆ ಹಾಗೂ ಲಭ್ಯತೆ
ಹೊಸ ವಿವೋ Y55s 5G (2023) ಸ್ಮಾರ್ಟ್‌ಫೋನ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್‌ಗೆ NTD 7,990 (ಸುಮಾರು 21,300 ರೂ. ಗಳು) ಹಾಗೂ 6GB RAM + 128GB ಸ್ಟೋರೇಜ್‌ಗಾಗಿ NTD 8,490 (ಸುಮಾರು 22,700 ರೂ. ಗಳು) ಬೆಲೆ ನಿಗದಿ ಮಾಡಲಾಗಿದೆ.

ಈ ಫೋನ್ ಗ್ಯಾಲಕ್ಸಿ ಬ್ಲೂ ಮತ್ತು ಸ್ಟಾರ್ ಬ್ಲ್ಯಾಕ್ ಬಣ್ಣದಲ್ಲಿ ಕಾಣಿಸಿಕೊಳ್ಳಲಿದ್ದು, ಬಳಕೆದಾರರಿಗೆ ಯಾವಾಗ ಲಭ್ಯವಾಗಲಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಹಾಗೆಯೇ ಭಾರತದಲ್ಲಿ ಯಾವಾಗ ಈ ಫೋನ್‌ ಲಾಂಚ್‌ ಆಗಲಿದೆ ಎಂಬ ವಿವರ ಕೂಡ ಲಭ್ಯವಾಗಿಲ್ಲ.

Best Mobiles in India

English summary
Vivo Y55s 5G smartphone has been launched and this phone has got a 50MP camera option. explained its price and important details in Kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X