ವಿವೋ Y55s 5G ಸ್ಮಾರ್ಟ್‌ಫೋನ್ ಬಿಡುಗಡೆ!..ಫೀಚರ್ಸ್ ಏನು?
ಜನಪ್ರಿಯ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ವಿವೋ Y55s 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y55s 5G ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಹಾಗಾದರೇ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿಶೇಷ
ವಿವೋ Y55s 5G ಸ್ಮಾರ್ಟ್‌ಫೋನ್ 1,080 x 2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 84.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ.

ಪ್ರೊಸೆಸರ್ ಯಾವುದು
ವಿವೋ Y55s 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಜೊತೆಗೆ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ವಿನ್ಯಾಸ
ವಿವೋ Y55s 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y55s 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ವಿವೋ Y55s 5G ಸ್ಮಾರ್ಟ್‌ಫೋನ್ ಬೆಲೆ ಚೀನಾದಲ್ಲಿ CNY 1,699 (ಭಾರತದಲ್ಲಿ ಅಂದಾಜು 20,200ರೂ. ಎನ್ನಲಾಗಿದೆ). ಇನ್ನು ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದ್ದು, ಕ್ರಮವಾಗಿ ಕಪ್ಪು, ನೀಲಿ ಮತ್ತು ಗುಲಾಬಿ ಆಗಿವೆ.
ವಿವೋ X70 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ X70 ಪ್ರೊ ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, HDR10 ಬೆಂಬಲವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ವಿವೋ X70 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್
ವಿವೋ X70 ಪ್ರೊ+ ಸ್ಮಾರ್ಟ್‌ಫೋನ್ 6.78 ಇಂಚಿನ ಅಲ್ಟ್ರಾ-HD AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications




