ವಿವೋದಿಂದ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್! ಸೆಲ್ಫಿ ಪ್ರಿಯರ ಮನಗೆಲ್ಲೋದು ಗ್ಯಾರಂಟಿ!
ವಿವೋ Y55t ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ವಿವೋ Y ಸರಣಿಗೆ ಸೇರ್ಪಡೆ ಆಗಿರುವ ಮತ್ತೊಂದು ಆಕರ್ಷಕ ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ.
ಹೌದು, ವಿವೋ Y55t ಸ್ಮಾರ್ಟ್‌ಫೋನ್ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y55t ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಹೇಗಿದೆ?
ವಿವೋ Y55t ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 394 PPI ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 19:9 ರಚನೆಯ ಅನುಪಾತವನ್ನು ಪಡೆದಿದ್ದು, 90.89% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 550 ಗರಿಷ್ಠ ನಿಟ್ಸ್ ಬ್ರೈಟ್‌ನೆಸ್ ನೀಡಲಿದೆ.
ವಿವೋ Y55t ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ Y55t ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಮಾಲಿ G57 GPU ಸಪೋರ್ಟ್ ಕೂಡ ಪಡೆದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಿದೆ ಎಂದು ಹೇಳಲಾಗಿದೆ.

ವಿವೋ Y55t ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ವಿವೋ Y55t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ ವಿವರಗಳು ಬಹಿರಂಗವಾಗಿಲ್ಲ. ಆದರೆ ಹಿಂಬದಿಯ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ವಿವೋ Y55t ಬ್ಯಾಟರಿ ಮತ್ತು ಇತರೆ
ವಿವೋ Y55t ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ವೈಫೈ, 3.5mm ಆಡಿಯೋ ಜಾಕ್, GPS, QZSS, OTG ಬೆಂಬಲ, USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್‌ಲಾಕ್ ಬೆಂಬಲ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ವಿವೋ Y55t ಬೆಲೆ ಮತ್ತು ಲಭ್ಯತೆ
ವಿವೋ Y55t ಸ್ಮಾರ್ಟ್‌ಫೋನ್‌ನ ಬೇಸ್ ಮಾಡೆಲ್ 8GB RAM ಮತ್ತು 128GB ಆಯ್ಕೆಯು CNY 999 ಯುವಾನ್ (ಅಂದಾಜು 11,600ರೂ)ಬೆಲೆಯನ್ನು ಹೊಂದಿದೆ. ಇದರ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಯು CNY 1,199 ಯುವಾನ್ (ಸುಮಾರು 13,900ರೂ)ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಕಪ್ಪು, ನೇರಳೆ, ಹಸಿರು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಭಾರತದ ಮಾರುಕಟ್ಟೆಗೆ ಯಾವಾಗ ಬರಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








