Home
ಸುದ್ದಿಜಾಲ

ವಿವೋದ ಈ ಜನಪ್ರಿಯ 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಆಕರ್ಷಕ ಆಫರ್‌!

ಜನಪ್ರಿಯ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾದ ವಿವೋ ಕಂಪನಿಯು ಹಲವು ಬಜೆಟ್‌ ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ವಿವೋ Y56 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದ್ದು, ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ ಆಗಿದೆ. ಈ ಮೂಲಕ ಖರೀದಿದಾರರಿಗೆ ಬೊಂಬಾಟ್‌ ಖುಷಿ ನೀಡಿದೆ.

ಹೌದು, ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ ಕಂಪೆನಿಯ ವಿವೋ Y56 5G ( Vivo Y56 5G ) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 20% ರಷ್ಟು ಕಡಿತವಾಗಿದೆ. ಈ ಪೋನಿನ 8GB RAM + 128GB ವೇರಿಯಂಟ್‌ 24,999ರೂ. ಆಗಿದ್ದು, ಆದ್ರೆ ಕೊಡುಗೆಯಲ್ಲಿ 19,999ರೂ. ಗಳಿಗೆ ಗ್ರಾಹಕರು ಖರೀದಿಸಬಹುದಾಗಿದೆ. ಅಂದಹಾಗೆ ಈ ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ವಿವೋದ ಈ ಜನಪ್ರಿಯ 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಆಕರ್ಷಕ ಆಫರ್‌!

ಹಾಗೆಯೇ ವಿವೋ Y56 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಂಭಗಾದಲ್ಲಿ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗಾದರೇ ವಿವೋ Y56 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿವೋ Y56 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ ಹೇಗಿದೆ : ವಿವೋ Y56 5G ಸ್ಮಾರ್ಟ್‌ಫೋನ್‌ 6.58 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 2408 × 1080 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿದೆ. ಇದರೊಂದಿಗೆ 60Hz ರಿಫ್ರೆಶ್ ರೇಟ್‌ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ಶೈಲಿಯ ಡಿಸ್‌ಪ್ಲೇ ಆಕರ್ಷಕವಾಗಿದೆ.

ವಿವೋ Y56 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್ ಬಲ ಏನು : ವಿವೋ Y56 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 8GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದ್ದು, ಜೊತೆಗೆ ಹೆಚ್ಚುವರಿ ಸಂಗ್ರಹಕ್ಕಾಗಿ ಎಸ್‌ಡಿ ಕಾರ್ಡ್‌ ಸ್ಲಾಟ್‌ ಆಯ್ಕೆ ಸಹ ಒದಗಿಸಲಾಗಿದೆ.

ವಿವೋ Y56 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆನ್ಸಾರ್ ಮಾಹಿತಿ : ವಿವೋ Y56 5G ಸ್ಮಾರ್ಟ್‌ಫೋನ್‌ ರಿಯರ್‌ನಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದ್ದರೆ, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದರ ಜೊತೆಗೆ ಸೆಲ್ಫಿ ಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್‌ ಕ್ಯಾಮೆರಾ ಒದಗಿಸಲಾಗಿದೆ.

ವಿವೋ Y56 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ : ಈ ಫೋನ್ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಗಳನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್‌ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆ ಇವೆ.

ವಿವೋ Y56 5G ಸ್ಮಾರ್ಟ್‌ಫೋನ್‌ ಮೆಮೊರಿ ಹಾಗೂ ಕಲರ್ ಆಯ್ಕೆ : ವಿವೋ Y56 5G ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಒಂದೇ ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್‌ ಎಂಜಿನ್ ಮತ್ತು ಆರೆಂಜ್ ಶಿಮ್ಮರ್ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
Vivo Y56 5G Phone Price Drop on Flipkart: Check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+