ಆನ್‌ಲೈನ್‌ನಲ್ಲಿ ವಿವೋ ಮೊಬೈಲ್ ಖರೀದಿಗೆ ಇದು ಸೂಕ್ತ ಸಮಯ!..ಜಬರ್ದಸ್ತ್ ಆಫರ್!
ಬಹುತೇಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ಪ್ಲಾಟ್‌ಫಾರ್ಮ್ ಅಂದ್ರೆ ಅಚ್ಚುಮೆಚ್ಚು. ಈ ತಾಣವು ಗ್ರಾಹಕರನ್ನು ಆಕರ್ಷಿಸಲು ಏನಾದರೊಂದು ಕೊಡುಗೆ ಘೋಷಣೆ ಮಾಡುತ್ತಲೇ ಸಾಗಿದೆ. ಮುಖ್ಯವಾಗಿ ಫೋನ್‌ಗಳಿಗೆ ಅಧಿಕ ಡಿಸ್ಕೌಂಟ್ ನೀಡುತ್ತದೆ. ಅಮೆಜಾನ್ ಸದ್ಯ ವಿವೋ Y56 5G ಸ್ಮಾರ್ಟ್‌ಫೋನ್ ಸಖತ್ ರಿಯಾಯಿತಿ ತಿಳಿಸಿದೆ.
ಹೌದು, ಪ್ರಮುಖ ಇ ಕಾಮರ್ಸ್ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ Y56 5G ಸ್ಮಾರ್ಟ್‌ಫೋನ್ ಶೇ. 24% ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8GB RAM + 128GB ವೇರಿಯಂಟ್ ಫೋನ್ 18,999ರೂ. ಗಳ ಆಫರ್ ಬೆಲೆಯಲ್ಲಿ ಲಭ್ಯ. ಅದಾಗ್ಯೂ, ಅಮೆಜಾನ್‌ನಲ್ಲಿ ಲಭ್ಯ ಇರುವ ಎಕ್ಸ್‌ಚೆಂಜ್ ಕೊಡುಗೆ, ಬ್ಯಾಂಕ್ ಆಫರ್ ಹಾಗೂ ಇತರೆ ಪಡೆದರೆ 15,999ರೂ. ಗಳಿಗೆ ಖರೀದಿಸಬಹುದು.

ಇನ್ನು ವಿವೋ Y56 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಪವರ್ ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದೆ. ಇನ್ನುಳಿದಂತೆ ವಿವೋ Y56 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆ ಹೀಗಿದೆ
ವಿವೋ Y56 5G ಮೊಬೈಲ್ 6.58 ಇಂಚಿನ FHD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 2408 × 1080 ಪಿಕ್ಸೆಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಇದರೊಂದಿಗೆ 60Hz ರಿಫ್ರೆಶ್ ರೇಟ್ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ಶೈಲಿಯ ಡಿಸ್‌ಪ್ಲೇ ಹೆಚ್ಚು ಆಕರ್ಷಕ ಎನಿಸುತ್ತದೆ.

ಯಾವ ಪ್ರೊಸೆಸರ್ ಬಲ ಇದೆ
ವಿವೋ ಕಂಪನಿಯ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್ ಸಪೋರ್ಟ್ ಹೊಂದಿದೆ. ಅಲ್ಲದೇ 8GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದ್ದು, ಇದರೊಂದಿಗೆ ಬಾಹ್ಯ ಸಂಗ್ರಹಕ್ಕಾಗಿ ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ನೀಡಲಾಗಿದೆ.
ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ರಚನೆ
ವಿವೋ Y56 5G ಮೊಬೈಲ್ ರಿಯರ್‌ನಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಸೆಲ್ಫಿ ಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ.

ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ
ವೀವೋದ ಈ ಫೋನ್ 18W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೌಲಭ್ಯಗಳು ಕೂಡಾ ಇವೆ.
ಮೆಮೊರಿ ಹಾಗೂ ಕಲರ್ ಆಯ್ಕೆಯ ಮಾಹಿತಿ
ವಿವೋ Y56 5G ಮೊಬೈಲ್ ಫೋನ್ 8GB + 128 GB ಸ್ಟೋರೇಜ್ ಒಂದೇ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್ ಎಂಜಿನ್ ಮತ್ತು ಆರೆಂಜ್ ಶಿಮ್ಮರ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ. ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








