Home
ಸುದ್ದಿಜಾಲ

Vivo: ಸೆಲ್ಫಿ ಪ್ರಿಯರ ನೆಚ್ಚಿನ ಫೋನ್‌ ಮೇಲೆ 28% ಡಿಸ್ಕೌಂಟ್‌ ಲಭ್ಯ! 128GB ಸ್ಟೋರೇಜ್‌ ಆಯ್ಕೆ!

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ ಸೇಲ್‌ನಲ್ಲಿ ಬಿಗ್‌ ಆಫರ್‌ ಲಭ್ಯವಾಗುತ್ತಿದೆ. ಒಂದಕ್ಕಿಂತ ಒಂದು ಸ್ಮಾರ್ಟ್‌ಫೋನ್‌ ಮೇಲೆ ಹೆಚ್ಚಿನ ರಿಯಾಯಿತಿಯನ್ನು ನೀಡಲಾಗುತ್ತಿದೆ. ಅದರಲ್ಲೂ ಇತ್ತೀಚಿಗೆ ಸಾಕಷ್ಟು ಸದ್ದು ಮಾಡಿದ್ದ Vivo Y56 5G ಸ್ಮಾರ್ಟ್‌ಫೋನ್‌ ಮೇಲೆ ಬರೋಬ್ಬರಿ 28% ಡಿಸ್ಕೌಂಟ್‌ ಅನ್ನು ಪಡೆದುಕೊಂಡಿದೆ.

ಹೌದು, Vivo Y56 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಭಾರಿ ರಿಯಾಯಿತಿಯಲ್ಲಿ ಮಾರಾಟವಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಅತಿ ಕಡಿಮೆ ಬೆಲೆಯಲ್ಲಿ ಖರೀದಿಸುವುದಕ್ಕೆ ಅವಕಾಶ ದೊರೆತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೆಲ್ಪಿ ಪ್ರಿಯರಿಗೆ ಸೂಕ್ತವಾದ ಕ್ಯಾಮೆರಾ ಸೆಟಪ್‌ನೊಂದಿಗೆ ಗಮನಸೆಳೆದಿದೆ. ಹಾಗಾದ್ರೆ Vivo Y56 5G ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೆಲ್ಫಿ ಪ್ರಿಯರ ನೆಚ್ಚಿನ ಫೋನ್‌ ಮೇಲೆ 28% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ

Vivo Y56 5G ಡಿಸ್ಕೌಂಟ್‌ ಏನಿದೆ?
Vivo Y56 5G ಸ್ಮಾರ್ಟ್‌ಫೋನಿನ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ ತಾಣದಲ್ಲಿ 24,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಸ್ಮಾರ್ಟ್‌ಪೋನ್‌ ಮೇಲೆ 28% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಕೇವಲ 17,999ರೂ ಬೆಲೆಗೆ ಮಾರಾಟವಾಗುತ್ತಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಕಾರ್ಡ್‌ ಆಫರ್‌ ಅನ್ನು ಸಹ ಘೋಷಿಸಲಾಗಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆ ಇನ್ನಷ್ಟು ಕಡಿಮೆ ಅಗಲಿದೆ.

ವಿವೋ Y56 5G ಫೋನ್‌ ಡಿಸ್‌ಪ್ಲೇ ರಚನೆ ಹೇಗಿದೆ?
ವಿವೋ Y56 5G ಸ್ಮಾರ್ಟ್‌ಫೋನ್‌ 6.58 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇದಲ್ಲದೆ ಡಿಸ್‌ಪ್ಲೇ 90.6% ಸ್ಕ್ರೀನ್-ಟು-ಬಾಡಿ ನಡುವಿನ ಅನುಪಾತವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿದ್ದು, 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ.

ಸೆಲ್ಫಿ ಪ್ರಿಯರ ನೆಚ್ಚಿನ ಫೋನ್‌ ಮೇಲೆ 28% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ

ವಿವೋ Y56 5G ಫೋನ್‌ ಪ್ರೊಸೆಸರ್‌ ಯಾವುದು?
ವಿವೋ Y56 5G ಫೋನ್ ಮೀಡಿಯಾಟೆಕ್‌ ಡೈಮೆನ್ಸಿಟಿ 700SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು FunTouch OS 13 ಓವರ್‌ಲೇ ಜೊತೆಗೆ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ.

ವಿವೋ Y56 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ Y56 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸೆಲ್ಫಿ ಪ್ರಿಯರ ನೆಚ್ಚಿನ ಫೋನ್‌ ಮೇಲೆ 28% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ

ವಿವೋ Y56 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ವಿವೋ Y56 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಸಾಮರ್ಥ್ಯ, 5G ಸಂಪರ್ಕ, Wi-Fi 802.11ac, ಬ್ಲೂಟೂತ್ 5.1, GPS, USB-C ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಸೇರಿವೆ. ಇದಲ್ಲದೆ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಕೂಡ ಒಳಗೊಂಡಿದೆ.

ಕಲರ್‌ ಆಯ್ಕೆ ಮತ್ತು ಲಭ್ಯತೆ
ವಿವೋ Y56 5G ಸ್ಮಾರ್ಟ್‌ಫೋನ್‌ ಪ್ರಸ್ತುತ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಇದನ್ನು ಅಮೆಜಾನ್‌ ತಾಣದಲ್ಲಿ Black Engine ಕಲರ್‌ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Vivo Y56 5G Smartphone Get 28% Discount in Amazon: Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+