ಭಾರತದಲ್ಲಿ ಸದ್ದಿಲ್ಲದೆ ಲಾಂಚ್ ಆಯ್ತು ವಿವೋ Y56 5G ಫೋನ್; ಬೆಲೆ ಎಷ್ಟು ಗೊತ್ತಾ?
ಪ್ರಮುಖ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ವಿವೋ ಈಗಾಗಲೇ ಹಲವಾರು ರೀತಿಯ ಸ್ಮಾರ್ಟ್‌ಫೋನ್ ಹಾಗೂ ಇನ್ನಿತರೆ ಗ್ಯಾಜೆಟ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಯಾಕೆಂದರೆ ಈ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಉತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಫೀಚರ್ಸ್‌ಗಳನ್ನು ಹೊಂದಿರುವುದು ವಿಶೇಷ. ಇದರ ನಡುವೆ ವಿವೋ ಹೊಸದಾಗಿ ಸದ್ದಿಲ್ಲದೆ ವಿವೋ Y56 5G ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ.

ಹೌದು, ಸ್ಮಾರ್ಟ್‌ಫೋನ್ ವಲಯದಲ್ಲಿ ಈಗಾಗಲೇ ಸಾಕಷ್ಟು ಫೋನ್‌ಗಳು ವಿವಿಧ ಫೀಚರ್ಸ್‌ಗಳೊಂದಿಗೆ ಲಾಂಚ್ ಆಗುತ್ತಿದ್ದು, ಇದರ ಸಾಲಿಗೆ ಈಗ ವಿವೋದ ವಿವೋ Y56 5G( Vivo Y56 5G ) ಸ್ಮಾರ್ಟ್‌ಫೋನ್ ಸೇರಿಕೊಳ್ಳಲಿದೆ. ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಬೆಲೆ ಎಷ್ಟಿರಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.
ವಿವೋ Y56 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ವಿವೋ Y56 5G ಸ್ಮಾರ್ಟ್‌ಫೋನ್ 6.58 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 2408 × 1080 ಪಿಕ್ಸೆಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಹಾಗೆಯೇ 60Hz ರಿಫ್ರೆಶ್ ರೇಟ್ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ಶೈಲಿಯ ಡಿಸ್‌ಪ್ಲೇ ಆಕರ್ಷಕವಾಗಿದೆ.
ವಿವೋ Y56 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ
ಈ ಹೊಸ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್ ಮೂಲಕ ರನ್ ಆಗುತ್ತದೆ. ಇದರೊಂದಿಗೆ 8GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದ್ದು, ಇದಿಷ್ಟೇ ಅಲ್ಲದೆ ಹೆಚ್ಚಿನ ಸ್ಟೋರೇಜ್‌ಗಾಗಿ ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ಸಹ ನೀಡಲಾಗಿದೆ.

ವಿವೋ Y56 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ
ವಿವೋ Y56 5G ಸ್ಮಾರ್ಟ್‌ಫೋನ್ ರಿಯರ್‌ನಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಹಾಗೂ 2MP ಸೆಕೆಂಡರಿ ಲೆನ್ಸ್ ಹೊಂದಿದೆ. ಜೊತೆಗೆ ಸೆಲ್ಫಿ ಉದ್ದೇಶಕ್ಕೆ 16MP ಮುಂಭಾಗದ ಕ್ಯಾಮೆರಾ ಅತ್ಯಾಕರ್ಷಕವಾಗಿ ಕಾಣುತ್ತದೆ.
ವಿವೋ Y56 5G ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ
ಈ ಫೋನ್ 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಬಳಕೆದಾರರಿಗೆ ಹೆಚ್ಚಿನ ಬ್ಯಾಕಪ್ ನೀಡಲಿದೆ. ಇದನ್ನು ಹೊರತುಪಡಿಸಿ ಈ ಫೋನ್‌ನ ಇನ್ನಷ್ಟು ಫೀಚರ್ಸ್‌ಗಳ ಕಡೆ ಕಣ್ಣಾಯಿಸುವುದಾದರೆ ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಹಾಗೂ ಕನೆಕ್ಟಿವಿಟಿ ಫೀಚರ್ಸ್‌ಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆ ಪಡೆದುಕೊಂಡಿದೆ.

ವಿವೋ Y56 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆ
ಪ್ರಮುಖ ವರದಿಗಳ ಪ್ರಕಾರ ಈ Y56 5G ಫೋನ್ 8GB/128GB ನ ಒಂದೇ ವೇರಿಯಂಟ್‌ನಲ್ಲಿ ಕಂಡುಬರಲಿದ್ದು, ಇದನ್ನು ಯಾವುದೇ ಆಫರ್‌ಗಳು ಇಲ್ಲದೆ 24,999 ರೂ. ಗಳಲ್ಲಿ ಖರೀದಿ ಮಾಡಬಹುದಾಗಿದೆ ಎನ್ನಲಾಗಿದೆ. ಅದಾಗ್ಯೂ 19,999 ರೂ.ಗಳ ಆಫರ್ ಬೆಲೆಯಲ್ಲೂ ಲಭ್ಯ ಇದೆ ಎನ್ನಲಾಗಿದೆ. ಅದರಂತೆ ಈ ಫೋನ್ ಬ್ಲ್ಯಾಕ್ ಎಂಜಿನ್ ಮತ್ತು ಆರೆಂಜ್ ಶಿಮ್ಮರ್ ಬಣ್ಣದ ಆಯ್ಕೆಯಲ್ಲಿ ಕಾಣಿಸಿಕೊಂಡಿದೆ.
ಈ ಫೋನ್‌ಅನ್ನು ಸದ್ಯಕ್ಕೆ ರಿಟೇಲರ್‌ಸ್ಟೋರ್ ಮೂಲಕ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ವರೆಗೂ ಯಾವುದೇ ಆನ್‌ಲೈನ್ ಸ್ಟೋರ್‌ನಲ್ಲಿ ಈ ಫೋನ್ ಮಾರಾಟದ ಬಗ್ಗೆ ಯಾವುದೇ ವಿವರಗಳು ತಿಳಿದು ಬಂದಿಲ್ಲ. ಮುಂದಿನ ದಿನಗಳಲ್ಲಿ ಆನ್‌ಲೈನ್‌ನಲ್ಲೂ ಲಭ್ಯವಾಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.


Click it and Unblock the Notifications








