ವಿವೋ Y70 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್!..ತ್ರಿವಳಿ ಕ್ಯಾಮೆರಾ!

|

ವಿವೋ ಮೊಬೈಲ್ ಕಂಪೆನಿ ಈಗಾಗಲೇ ಹಲವು ಅಗ್ಗದ ಫೋನ್‌ಗಳನ್ನು ಪರಿಚಯಿಸಿದೆ. ವಿವೋ ಸಂಸ್ಥೆಯು ಇದೀಗ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜಾಗಿದೆ. ಅದುವೇ ವಿವೋ Y70 ಸ್ಮಾರ್ಟ್‌ಫೋನ್ ಆಗಿದ್ದು, ಈ ಫೋನಿನ ಲೀಕ್ ಫೀಚರ್‌ಸ್ಗಳು ಗ್ರಾಹಕರ ಗಮನ ಸೆಳೆದಿವೆ. ಸ್ಯಾಮ್‌ಸಂಗ್ Exynos 880 SoC ಪ್ರೊಸೆಸರ್‌ನಲ್ಲಿ ಈ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ವಿವೋ Y70

ಹೌದು, ವಿವೋ ಕಂಪೆನಿ ವಿವೋ Y70 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಫೋನಿನ ಫೀಚರ್ಸ್‌ಗಳು ಇದೀಗ ಲೀಕ್ ಆಗಿದ್ದು, ಸಂಸ್ಥೆಯ ಈ ಹಿಂದಿನ ವಿವೋ Y70s ಫೋನಿನ ಫೀಚರ್ಸ್‌ಗಳನ್ನು ಹೋಲುವಂತಿವೆ. ಇನ್ನು ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿರಲಿದ್ದು, 4,500mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಹಾಗಾದರೇ ಲೀಕ್ ಮಾಹಿತಿ ಪ್ರಕಾರ ಈ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳು ಹೊಂದಿರಲಿದೆ ಎಂಬುದನ್ನು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ವಿವೋ Y70 ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರದ್ದು, 6.5 ಇಂಚಿನ ಡಿಸ್‌ಪ್ಲೇಯನ್ನ ಇರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇಯು LCD ಮಾದರಿಯಲ್ಲಿರಲಿದ್ದು, ಸ್ಕ್ರೀನ್‌ ರಿಫ್ರೆಶ್ ರೇಟ್‌ 60Hz ಆಗಿರಲಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ವಿವೋ Y70 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ Exynos 880 SoC ಪ್ರೊಸೆಸರ್ ಒಳಗೊಂಡಿರುವ ಸಾಧ್ಯತೆಗಳಿವೆ. ಇದರೊಂದಿಗೆ ಆಂಡ್ರಾಯ್ಡ್ 10 ಓಎಸ್ ಇರಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB + 128GB ಮತ್ತು 8GB + 128GB ಆಂತರಿಕ ಸಂಗ್ರಹ ಸಾಮರ್ಥ್ಯ ಹೊಂದಿರುವ ಎರಡು ವೇರಿಯೆಂಟ್‌ ಆಯ್ಕೆಯನ್ನ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ವಿವೋ Y70 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಇರಲಿದೆ. ಅದೇ ರೀತಿ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿರಲಿದೆ. ಇನ್ನು ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ನೀಡುವ ಸಾಧ್ಯತೆಗಳಿವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y70 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರಲಿದ್ದು, ಇದರೊಂದಿಗೆ 18W ಸಾಮರ್ಥ್ಯದ ವೇಗದ ಚಾರ್ಜಿಂಗ್ ನೀಡುವ ನಿರೀಕ್ಷೆಗಳಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್‌, ವೈಫೈ, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Vivo Y70 is said to come in two RAM configurations.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X