Home
ಸುದ್ದಿಜಾಲ

ವಿವೋ Y70s ಸ್ಮಾರ್ಟ್‌ಫೋನ್ ಬಿಡುಗಡೆ! ಅತ್ಯಾಕರ್ಷಕ ಫೀಚರ್ಸ್‌!

ಚೀನಾ ಮೂಲದ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ವಿವೋ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಸದ್ಯ ತನ್ನ ಭಿನ್ನ ಮಾದರಿಯ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿರುವ ವಿವೋ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ವಿವೋ Y70s

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ಹೊಸ ವಿವೋ Y70s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಹೊಸ ಸ್ಯಾಮ್‌ಸಂಗ್ ಎಕ್ಸಿನೋಸ್ 880SoC ಪ್ರೊಸೆಸರ್‌ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್ ಆಗಿ ಚೀನಾದಲ್ಲಿ ಬಿಡುಗಡೆ ಆಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 5G ಫೋನ್ ಆಗಿದ್ದು, ಇದು 6.53 ಇಂಚಿನ ಡಿಸ್ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y70s ಸ್ಮಾರ್ಟಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.53-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, IPS ಎಲ್‌ಸಿಡಿ ವಿನ್ಯಾಸವನ್ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಸ್ಕ್ರೀನ್‌ ಟು ಬಾಡಿ 90.72% ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ 19.5:9 ರಚನೆಯ ಅನುಪಾತವನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 880 SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇತೇ 6GB RAM+ 128GB, 8GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿರುವ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y70s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್‌ ಆಂಗಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18,500 ಡ್ಯುಯಲ್-ಎಂಜಿನ್ ಫ್ಲ್ಯಾಷ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕೂಲಿಂಗ್‌ ಟೆಕ್ನಾಲಜಿಯನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್, GPS, ಮೈಕ್ರೋ-ಯುಎಸ್‌ಬಿ ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ದಿಕ್ಸೂಚಿ ಅನ್ನು ಸಹ ಒಳಗೊಂಡಿದೆ. ಜೊತೆಗೆ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y70s ಸ್ಮಾರ್ಟ್‌ಫೋನ್‌ ಬೆಸ್‌ ಮಾಡೆಲ್‌ 6GB RAM + 128GB ಆಯ್ಕೆಗೆ CNY 1,998 (ಸುಮಾರು 21,200 ರೂ.)ಬೆಲೆ ನಿಗದಿಪಡಿಸಲಾಗಿದೆ. ಇದಲ್ಲದೆ 8GB RAM + 128GB ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ CNY 2,198(ಸರಿಸುಮಾರು 23,300 ರೂ.) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫಾಗ್ ಇಲ್ಯೂಷನ್, ಸ್ಟಾರ್‌ಲೈಟ್ ಬ್ಲೂ ಮತ್ತು ಮೂನ್ ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Y70s has been launched in China as the first smartphone to be powered by the new Samsung Exynos 880 SoC. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+