ವಿವೋ Y71t ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಫೀಚರ್ಸ್!
ಟೆಕ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ Y71t ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಅನ್ನು ಹೊಂದಿದೆ. ಜೊತೆಗೆ 4,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y71t ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಮಿರಾಜ್ ಮತ್ತು ಮಿಡ್ನೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y71t ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90.1% ಸ್ಕ್ರೀನ್-ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 3000000: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದ್ದು, ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸೆನ್ಸಾರ್ ಹೊಂದಿದೆ.

ಪ್ರೊಸೆಸರ್ ಯಾವುದು?
ವಿವೋ Y71t ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒರಿಜಿನೋಸ್ 1.0 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಮಾಲಿ-G57 GPU ಹೊಂದಿದೆ. ಹಾಗೆಯೇ 8GB RAM ಮತ್ತು 256GB ಹಾಗೂ 8GB RAM + 128GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಇಂಟರ್‌ಬಿಲ್ಟ್ RAM ವರ್ಚುವಲ್ ವಿಸ್ತರಣೆಯನ್ನು 4GB ವರೆಗೆ ಬೆಂಬಲಿಸುತ್ತದೆ. ಇದು ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷ
ವಿವೋ Y71t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್/2.2 ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು f/2.0 ಲೆನ್ಸ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y71t ಸ್ಮಾರ್ಟ್‌ಫೋನ್ 4,000mAh ಬ್ಯಾಟರಿಯನ್ನು ಒದಗಿಸಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಈ ಫೋನ್ ಸಿಂಗಲ್ ಚಾರ್ಜ್‌ನಲ್ಲಿ 4G ನೆಟ್‌ವರ್ಕ್‌ನಲ್ಲಿ 14.5 ಗಂಟೆಗಳ ಟಾಕ್ ಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಟಾಪ್, 5G, 4G VoLTE, ವೈಫೈ, ಬ್ಲೂಟೂತ್ v5.1, GPS/A-GPS, ಯುಎಸ್‌ಬಿ ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y71t ಸ್ಮಾರ್ಟ್‌ಫೋನ್ ಚೀನಾದಲ್ಲಿ 8GB RAM + 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗೆ ಸಿಎನ್‌ವೈ 1,799 (ಅಂದಾಜು 21,000ರೂ.) ಬೆಲೆ ಹೊಂದಿದೆ. ಇನ್ನು 8GB + 256GB ಆಯ್ಕೆಗೆ CNY 1,999 (ಸರಿಸುಮಾರು 23,400ರೂ.)ಬೆಲೆ ಹೊಂದಿದೆ. ಇದು ಮಿರಾಜ್ ಮತ್ತು ಮಿಡ್ನೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊ ಮಾಹಿತಿ ಇನ್ನು ಬಹಿರಂಗವಾಗಿಲ್ಲ.


Click it and Unblock the Notifications








