Home
ಸುದ್ದಿಜಾಲ

ವಿವೋ Y72 5G ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು!

ವಿವೋ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ಕ್ಯಾಮೆರಾ ಫೀಚರ್ಸ್‌ ಡಿಸ್‌ಪ್ಲೇ ರಚನೆಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಇದೀಗ ಹೊಸ ವಿವೋ Y72 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಮಿಡಿಯಾ ಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ.

ವಿವೋ Y 72 5G ಸ್ಮಾರ್ಟ್‌ಫೋನ್

ಹೌದು, ವಿವೋ ಕಂಪೆನಿ ಹೊಸ ವಿವೋ Y 72 5G ಸ್ಮಾರ್ಟ್‌ಫೋನ್‌ ಅನ್ನು ಥೈಲ್ಯಾಂಡ್‌ನಲ್ಲಿ ಬಿಡುಗಡೆ ಮಾಡಿದೆ. ಇದು ವಿವೋ ವೈ-ಸರಣಿಯ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಅಲ್ಲದೆ ಇದು ಅಲ್ಟ್ರಾ ಗೇಮ್ ಮೋಡ್ ಮತ್ತು ಮಲ್ಟಿ-ಟರ್ಬೊ ಮೋಡ್ ಅನ್ನು ಹೊಂದಿದೆ, ಇದು ಕೆಲಸದ ದಕ್ಷತೆಯನ್ನು ಹೆಚ್ಚಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ಅನುಪಾತ

ಡಿಸ್‌ಪ್ಲೇ ರಚನೆ ಮತ್ತು ಅನುಪಾತ

ವಿವೋ Y 72 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಪೂರ್ಣ-ಎಚ್‌ಡಿ + ಎಲ್‌ಸಿಡಿ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 90.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಧಾರಿತ ಹ್ಯಾಂಡ್‌ಸೆಟ್ ಫಂಟೌಚ್ ಓಎಸ್ 11.1 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ Y 72 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಹ್ಯಾಂಡ್‌ಸೆಟ್‌ನಲ್ಲಿ ಸ್ಪೀಕರ್ ಬೂಸ್ಟ್ 3.0 ತಂತ್ರಜ್ಞಾನದೊಂದಿಗೆ ಸೂಪರ್ ಲೀನಿಯರ್ ಸ್ಪೀಕರ್‌ಗಳೂ ಇದ್ದು, ಇದು ಸ್ಪಷ್ಟವಾದ ಧ್ವನಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y 72 ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರಕ್ಕೆ THB 9,999 (ಸುಮಾರು 23,300 ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂದಿನಿಂದ ಮಾರ್ಚ್ 30 ರವರೆಗೆ ಪ್ರೀ ಬುಕಿಂಗ್‌ಗೆ ಲಭ್ಯವಿರುತ್ತದೆ. ಅಲ್ಲದೆ ಇದು ಮಾರ್ಚ್ 31 ರಂದು ಮಾರಾಟವಾಗಲಿದೆ. ಇದನ್ನು ಗ್ರ್ಯಾಫೈಟ್ ಬ್ಲ್ಯಾಕ್ ಮತ್ತು ಡ್ರೀಮ್ ಗ್ಲೋ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Best Mobiles in India

English summary
Vivo Y72 5G sports a triple rear camera setup, headlined by a 64-megapixel primary sensor.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+