ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ Y72 5G ಸ್ಮಾರ್ಟ್‌ಫೋನ್‌!...ಬೆಲೆ ಎಷ್ಟು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಸಂಸ್ಥೆ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಗೆ ಹೊಸದಾಗಿ ವಿವೋ Y72 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಅಧಿಕ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಆಕರ್ಷಕ ಎನಿಸಿಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ವಿವೋ Y72 5G ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಹಾಗಾದರೇ ವಿವೋ Y72 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y 72 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 6.58-ಇಂಚಿನ ಪೂರ್ಣ-ಹೆಚ್‌ಡಿ + ಎಲ್‌ಸಿಡಿ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 20: 9 ರಚನೆಯ ಅನುಪಾತ ಹೊಂದಿದೆ. ಹಾಗೆಯೇ 90.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. 90Hz ಸ್ಕ್ರೀನ್ ರೀಫ್ರೇಶ್ ರೇಟ್ ಪಡೆದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ವಿವೋ Y72 5G ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ ಈ ಹ್ಯಾಂಡ್‌ಸೆಟ್ ಫಂಟೌಚ್ ಓಎಸ್ 11.1 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ವಿವೋ Y 72 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ f/2.4 ಅಪರ್ಚರ್ ನೊಂದಿಗೆ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y72 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಹ್ಯಾಂಡ್‌ಸೆಟ್‌ನಲ್ಲಿ ಸ್ಪೀಕರ್ ಬೂಸ್ಟ್ 3.0 ತಂತ್ರಜ್ಞಾನದೊಂದಿಗೆ ಸೂಪರ್ ಲೀನಿಯರ್ ಸ್ಪೀಕರ್‌ಗಳೂ ಇದ್ದು, ಇದು ಸ್ಪಷ್ಟವಾದ ಧ್ವನಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y 72 ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಆಯ್ಕೆ ಹೊಂದಿದೆ. ಭಾರತದಲ್ಲಿ ಇದರ ಬೆಲೆಯು 20,990ರೂ. ಆಗಿದೆ. ಇಂದಿನಿಂದ (ಜುಲೈ 15) ಅಮೆಜಾನ್, ಪ್ಲಿಪ್‌ಕಾರ್ಟ್‌, ಟಾಟಾಕ್ಲಿಕ್ ತಾಣಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಪ್ರಿಸ್ಮ್ ಮ್ಯಾಜಿಕ್ ಹಾಗೂ ಸ್ಲೆಟ್ ಗ್ರೇ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Y72 5G price in India has been set at Rs. 20,990 for the single, 8GB RAM + 128GB storage variant.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X