Vivo: ವಿವೋದ ಈ ಫೋನ್‌ಗೆ 34% ರಿಯಾಯಿತಿ! 128 GB ಸ್ಟೋರೇಜ್.. 64MP ಕ್ಯಾಮೆರಾ
ವಿವೋ ಸ್ಮಾರ್ಟ್‌ಫೋನ್‌ಗಳನ್ನು (Vivo smartphone) ಜನರು ಸಾಮಾನ್ಯವಾಗಿ ಹೆಚ್ಚು ಹೆಚ್ಚಾಗಿ ಖರೀದಿ ಮಾಡುತ್ತಿರುತ್ತಾರೆ. ಅದರಂತೆ ವಿವೋದ ಸ್ಮಾರ್ಟ್‌ಫೋನ್‌ವೊಂದಕ್ಕೆ ಪ್ರಮುಖ-ಇ ಕಾಮರ್ಸ್ ಸೈಟ್‌ನಲ್ಲಿ ಅಫರ್ ಬೆಲೆಗೆ ನೀಡಲಾಗುತ್ತಿದೆ. ಈ ಮೂಲಕ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಹೌದು, ಬಹು ಬೇಡಿಕೆ ಇರುವ ವಿವೋ Y73 ಸ್ಮಾರ್ಟ್‌ಫೋನ್‌ಗೆ (Vivo Y73 smartphone) ಇದೀಗ 34% ರಿಯಾಯಿತಿ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆಯೊಂದಿಗೆ ಲಭ್ಯ ಇದ್ದು, 64 ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಬೆಲೆ ವಿವರವನ್ನು ತಿಳಿಸಿಕೊಡಲಾಗಿದೆ ಓದಿರಿ.

ವಿವೋ Y73 ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಫೋನ್‌ನ ಸಾಮಾನ್ಯ ದರ 24,990ರೂ.ಗಳಾಗಿದ್ದು, ನೀವೀಗ ಇದನ್ನು 16,490ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್ ಈ ಫೋನ್‌ಗೆ ಬರೋಬ್ಬರಿ 34% ರಿಯಾಯಿತಿ ನೀಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಅನ್ನು ಖರೀದಿ ಮಾಡಬಹುದು.
ಫ್ಲಿಪ್‌ಕಾರ್ಟ್ ಯುಪಿಐ ಮೂಲಕ ಖರೀದಿ ಮಾಡಿದ್ರೆ 25ರೂ.ಗಳ ತ್ವರಿತ ರಿಯಾಯಿತಿ, ಪಾರ್ಟನರ್ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 10,000 ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಅಲ್ಲದೆ ಕೂಪಲ್ ಸಹ ಲಭ್ಯ ಇದೆ. ಇನ್ನು ಇಎಮ್‌ಐ ಆಯ್ಕೆಯನ್ನೂ ನೀಡಲಾಗಿದ್ದು, ತಿಂಗಳಿಗೆ 580 ರೂ.ಗಳನ್ನು ಪಾವತಿ ಮಾಡುವ ಮೂಲಕ ಈ ಫೋನ್ ಖರೀದಿ ಮಾಡಬಹುದಾಗಿದೆ. ಹಾಗಿದ್ರೆ, ಈ ಫೋನ್ ಈ ಬೆಲೆಗೆ ಸೂಕ್ತವೇ ಅನ್ನೋದನ್ನೂ ಗಮನಿಸೋಣ.

ವಿವೋ Y73 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.44 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಹೆಚ್‌ಡಿಆರ್ 10, 570 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹಾಗೂ 409 ppi ಸಾಂದ್ರತೆ, 83.5% ಸ್ಕ್ರೀನ್-ಟು-ಬಾಡಿ ಅನುಪಾತದೊಂದಿಗೆ ಉತ್ತಮವಾಗಿದೆ.
ವಿವೋ Y73 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 11, ಫನ್‌ಟಚ್ 11.1 ಓಎಸ್ ಅನ್ನು ರನ್ ಮಾಡಲಿದ್ದು, ಮೀಡಿಯಾಟೆಕ್ MT6785V/CD ಹಿಲಿಯೊ G95 (12 nm) ಪ್ರೊಸೆಸರ್ ಬಲ ಪಡೆದುಕೊಂಡಿದೆ. ಹಾಗೆಯೇ ಮಾಲಿ-G76 MC4 ಜಿಪಿಯು ಬಲದೊಂದಿಗೆ ಉತ್ತಮ ಗೇಮಿಂಗ್ ಹಾಗೂ ಇತರೆ ವಿಡಿಯೋ ಸ್ಟ್ರೀಮಿಂಗ್ ಸೌಲಭ್ಯ ಪಡೆಯಬಹುದಾಗಿದೆ. ಜೊತೆಗೆ ಈ ಫೋನ್ 8 GB RAM ಹಾಗೂ 128 GB ಇಂಟರ್‌ಸ್ಟೋರೇಜ್ ಬೆಂಬಲ ಪಡೆದುಕೊಂಡಿದೆ.
ವಿವೋ Y73 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ,2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ 16 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ಹೊಂದಿದೆ. ಈ ಸೆನ್ಸರ್ ಮೂಲಕ 1080p ಸಾಮರ್ಥ್ಯದ ವಿಡಿಯೋಗಳನ್ನು ಸೆರೆಹಿಡಿಯಬಹುದಾಗಿದೆ.

ವಿವೋ Y73 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಜೊತೆಗೆ 3.5 ಎಂಎಂ ಜ್ಯಾಕ್, 24-ಬಿಟ್/192kHz ಹೈ-ರೆಸ್ ಆಡಿಯೋ, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್ ಗ್ಲೋನಾಸ್, ಗೆಲಿಲಿಯೋ, ಬಿಡಿಎಸ್ ಕನೆಕ್ಟಿವಿಟಿ ಬೆಂಬಲ ಪಡೆದಿದೆ.


Click it and Unblock the Notifications








