Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ವಿವೋದಿಂದ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ!..ಫೀಚರ್ಸ್‌ ಏನು?

ಜನಪ್ರಿಯ ವಿವೋ ಕಂಪೆನಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ವಿವೋ ತನ್ನ Y ಸರಣಿಯಲ್ಲಿ ಕೆಲವು ಬಜೆಟ್‌ ಫೋನ್‌ಗಳನ್ನು ಪರಿಚಯಿಸಿ ಭಾರೀ ಸದ್ದು ಮಾಡಿದೆ. ಅದೇ ಸರಣಿಯಲ್ಲಿ ಇದೀಗ ಹೊಸ ವಿವೋ Y73t ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಪಡೆದುಕೊಂಡಿದೆ

ಹೌದು, ವಿವೋ ಕಂಪೆನಿ ನೂತನವಾಗಿ ವಿವೋ Y73t ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ವಿವೋ Y73t ಬ್ಲೂ ಮತ್ತು ಬ್ಲ್ಯಾಕ್‌ನ ಎರಡು ಬಣ್ಣ ಆಯ್ಕೆಗಳಲ್ಲಿ ಕಾಣಿಸಿಕೊಂಡಿದೆ. ಇನ್ನುಳಿದಂತೆ ವಿವೋ Y73t ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y73t ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರೀಫ್ರೇಶ್ ರೇಟ್ ಹೊಂದಿದ್ದು, 180Hz ಟಚ್ ಸ್ಯಾಪ್ಲಿಂಗ್ ರೇಟ್ ಒಳಗೊಂಡಿದೆ. ಜೊತೆಗೆ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ವಿವೋ Y73t ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256GB ಮತ್ತು 12GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ವಿವೋ Y73t ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಆ ಪೈಕಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಪೋರ್ಟ್ರೇಟ್ ಲೈಟ್ ಎಫೆಕ್ಟ್, ವಿಡಿಯೋ ಫೇಸ್ ಬ್ಯೂಟಿ, ಸೇರಿದಂತೆ ಕೆಲವು ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y73t ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 4ಜಿ ಎಲ್ ಟಿಇ, ವೈ-ಫೈ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 163.87x75.33x9.17mm ಸುತ್ತಳತೆ ಪಡೆದಿದ್ದು, 201.5ಗ್ರಾಂ ತೂಕ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ Y73t ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ ಬೆಲೆಯು CNY 1,399 (ಭಾರತದಲ್ಲಿ ಅಂದಾಜು16,000ರೂ) ಆಗಿದೆ, 8GB RAM + 256GB ವೇರಿಯಂಟ್‌ ಬೆಲೆಯು CNY 1,599 (ಭಾರತದಲ್ಲಿ ಅಂದಾಜು 18,500ರೂ) ಹಾಗೆಯೇ 12GB RAM + 256GB ವೇರಿಯಂಟ್‌ ಬೆಲೆಯು 1,799 (ಭಾರತದಲ್ಲಿ ಅಂದಾಜು 21,000ರೂ) ಎನ್ನಲಾಗಿದೆ.

Best Mobiles in India

English summary
Vivo Y73t With 6,000mAh Battery Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+