Home
ಸುದ್ದಿಜಾಲ

ವಿವೋ Y73t ಸ್ಮಾರ್ಟ್‌ಫೋನ್‌ ಬಿಡುಗಡೆ! 6,000mAh ಬ್ಯಾಟರಿ ಬ್ಯಾಕಪ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನದೇ ಆದ ಛಾಪು ಮೂಡಿಸಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಈಗಾಗಲೇ ಹಲವು ಆಕರ್ಷಕ ಕ್ಯಾಮೆರಾ ಫೀಚರ್ಸ್‌ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ವಿವೋ Y73t ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ Y73t ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y73t ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 60Hz ರಿಫ್ರೆಶ್ ರೇಟ್, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ Y73t ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಡ್ರಾಯ್ಡ್‌ 11 ನಲ್ಲಿ ಒರಿಜನ್‌OS ಓಷನ್ ಸ್ಕಿನ್‌ನೊಂದಿಗೆ ರನ್‌ ಆಗಲಿದೆ. ಇದಕ್ಕೆ ಪೂರಕವಾಗಿ ಮಾಲಿ-ಜಿ 57 ಜಿಪಿಯು ಸಪೋರ್ಟ್‌ ಅನ್ನು ಹೊಂದಿಎ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ವಿವೋ Y73t ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಫ್ಲ್ಯಾಶ್‌ ಚಾರ್ಜ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಮೋಡ್ 5G ಸಂಪರ್ಕವನ್ನು ಬೆಂಬಲಿಸುತ್ತದೆ. ಅಲ್ಲದೆ ವೈ-ಫೈ ಮತ್ತು ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಫೇಸ್ ವೇಕ್ ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y73t ಸ್ಮಾರ್ಟ್‌ಫೋನ್‌ ಸದ್ಯ ಚೀನಾದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ 8GB RAM + 128GB ಸ್ಟೋರೇಜ್‌ ಆಯ್ಕೆಗೆ CNY 1,399 (ಅಂದಾಜು 16,000ರೂ) ಹೊಂದಿದೆ. ಅಲ್ಲದೆ 8GB RAM + 256GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ CNY 1,599 (ಸರಿಸುಮಾರು 18,500ರೂ) ಹಾಗೂ 12GB RAM + 256GB ಸ್ಟೋರೇಜ್‌ ಆಯ್ಕೆಗೆ CNY 1,799 (ಸುಮಾರು 21,000ರೂ)ಬೆಲೆಯನ್ನು ಹೊಂದಿದೆ. ಈ ವಿವೋ ಸ್ಮಾರ್ಟ್‌ಫೋನ್ ಅನ್ನು ಅಟುಮಾನ್‌, ಫಾಗ್ ಬ್ಲೂ ಮತ್ತು ಮಿರರ್ ಬ್ಲ್ಯಾಕ್‌ನಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Vivo Y73t With Dimensity 700 SoC Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+