Just In
Don't Miss
- Lifestyle
ಮಳೆಗಾಲದಲ್ಲಿ ಗರ್ಭಿಣಿಯರ ಆಹಾರ ಕ್ರಮ ಹೀಗಿದ್ದರೆ ಉತ್ತಮ
- Automobiles
1,105 ಕೋಟಿ ರೂ.ಗೆ ಹರಾಜಾಗಿದೆ ಮರ್ಸಿಡಿಸ್ ಬೆಂಝ್ನ ಈ ವಿಂಟೇಜ್ ಕಾರು!
- News
Breaking: ಜ್ಞಾನವಾಪಿ ಮಸೀದಿ ಪ್ರಕರಣ ವಾರಣಾಸಿ ಜಿಲ್ಲಾ ಕೋರ್ಟ್ಗೆ ವರ್ಗಾವಣೆ
- Sports
ಟೀಕೆಗಳಿಂದ ಗೊಂದಲಕ್ಕೀಡಾಗಬೇಡಿ: ವಿರಾಟ್ ಕೊಹ್ಲಿಗೆ ಹೀಗೆ ಕಿವಿಮಾತು ಹೇಳಿದ್ಯಾರು?
- Movies
ಬಾಡಿ ಶೇಮಿಂಗ್ ಇದೆ, ಒತ್ತಡ ಬೇಡ: ನಟಿ ಮಯೂರಿ
- Education
IOCL Recruitment 2022 : 43 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿತ ಮಾಡುವುದು ಹೇಗೆ?
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ ಇಡಲಿದೆ ವಿವೋ Y75 5G ಸ್ಮಾರ್ಟ್ಫೋನ್!
ವಿವೋ ಕಂಪೆನಿ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳಿಂದ ಜನಪ್ರಿಯತೆ ಪಡೆದಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ವಿವೋ Y75 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಬಿಡುಗಡೆಗೂ ಮುನ್ನ ಈ ಸ್ಮಾರ್ಟ್ಫೋನ್ ಬಗ್ಗೆ ಟ್ವಿಟರ್ನಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ವಿವೋ Y75 5G ಸ್ಮಾರ್ಟ್ಫೋನ್ ವಿನ್ಯಾಸದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y75 5G ಸ್ಮಾರ್ಟ್ಫೋನ್ ಲಾಂಚ್ ಮಾಡಲು ವೇದಿಕೆ ಸಿದ್ದಪಡಿಸಿದೆ. ಸದ್ಯ ಬಿಡುಗಡೆ ಆಗಿರುವ ಟೀಸರ್ ಮಾಹಿತಿ ಪ್ರಕಾರ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್ಫೋನ್ ವಾಟರ್ಡ್ರಾಪ್-ಶೈಲಿಯ ನಾಚ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y75 5G ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್ಡಿ ಡಿಸ್ಪ್ಲೇ ಹೊಂದಿರಲಿದೆ. ಈ ಡಿಸ್ಪ್ಲೇಯು 20:9 ರಚನೆಯ ಅನುಪಾತ ಹೊಂದಿದ್ದು, 400 ಪಿಪಿಐ ಪಿಕ್ಸೆಲ್ ಸಾಂದ್ರತೆ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಡಿಸ್ಪ್ಲೇ 90.37% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ಒಳಗೊಂಡಿದೆ ಎನ್ನಲಾಗಿದೆ.

ಪ್ರೊಸೆಸರ್ ಯಾವುದು?
ವಿವೋ Y75 5G ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್ಟಚ್ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 256 GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಹೇಗಿರಲಿದೆ?
ವಿವೋ Y75 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರುತ್ತದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y75 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್ಫೋನ್ನ ಅಧಿಕೃತ ಬಿಡುಗಡೆ ದಿನಾಂಕವನ್ನು ಕಂಪನಿಯು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಇದು ಕಪ್ಪು ಮತ್ತು 'ಅರೋರಾ ಡಾನ್' ರೀತಿಯ ಬಣ್ಣ ರೂಪಾಂತರದಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ವಿವೋ Y21A ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ 6.51-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 1GB ತನಕ RAM ಅನ್ನು ವಿಸ್ತರಿಸುವ ಅವಕಾಶ ಕೂಡ ಹೊಂದಿದೆ. ಜೊತೆಗೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999