ಭಾರತದಲ್ಲಿ ವಿವೋ Y75 5G ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y75 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y75 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ಲೋಯಿಂಗ್ ಗ್ಯಾಲಕ್ಸಿ ಮತ್ತು ಸ್ಟಾರ್‌ಲೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y75 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90.37 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 400 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y75 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಎಫ್‌ನೊಂದಿಗೆ 2 ಮೆಗಾಪಿಕ್ಸೆಲ್ ಬೊಕೆ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ವಿವೋನ ಎಕ್ಸ್‌ಟ್ರೀಮ್ ನೈಟ್ AI ಆಧಾರಿತ ಅಲ್ಗಾರಿದಮ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y75 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 5G, 4G LTE, ಬ್ಲೂಟೂತ್ 5.1, Wi-Fi, GPS ಮತ್ತು FM ರೇಡಿಯೋ ಬೆಂಬಲವನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ Y75 5G ಸ್ಮಾರ್ಟ್‌ಫೋನ್‌ ಬೆಲೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯದ 21,990ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಗ್ಯಾಲಕ್ಸಿ ಮತ್ತು ಸ್ಟಾರ್‌ಲೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಜೊತೆಗೆ ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಲು ಲಭ್ಯವಿದೆ.

Best Mobiles in India

English summary
Vivo Y75 5G comes with 8GB of memory that can be ‘extended’ to 12GB.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X