Just In
- 24 min ago
ವಾಟ್ಸಾಪ್ನ ಸ್ಟೇಟಸ್ ವಿಭಾಗದಲ್ಲಿ ನೂತನ ಫೀಚರ್ಸ್; ಏನೆಂದು ತಿಳಿಯಿರಿ!
- 48 min ago
ನೀವು ಏರ್ಟೆಲ್ ಸಿಮ್ ಬಳಕೆ ಮಾಡ್ತೀರಾ?..ಹಾಗಿದ್ರೆ, ಈ ಪ್ಲ್ಯಾನ್ ಬಗ್ಗೆ ತಿಳಿದಿರಿ!
- 2 hrs ago
ಸ್ಯಾಮ್ಸಂಗ್ ಗ್ಯಾಲಕ್ಸಿ F23 5G ಫೋನ್ ಬೆಲೆ ಇಳಿಕೆ!..ಈ ಚಾನ್ಸ್ ಬಿಡಬೇಡಿ!
- 2 hrs ago
ಭಾರತದಲ್ಲಿ ಟೆಕ್ನೋ ಫ್ಯಾಂಟಮ್ X2 ಪ್ರೊ ಸ್ಮಾರ್ಟ್‌ಫೋನ್ ಲಾಂಚ್; ಶಕ್ತಿಶಾಲಿ ಪ್ರೊಸೆಸರ್ ಆಯ್ಕೆ!
Don't Miss
- Sports
IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ದ್ವಿಶತಕ ಬಾರಿಸಿ ದಾಖಲೆ ಬರೆದ ಶುಭ್ಮನ್ ಗಿಲ್
- Automobiles
ಟಾಟಾ ಪಂಚ್ ಅಬ್ಬರ: 15 ತಿಂಗಳಲ್ಲೇ ಅಪರೂಪದ ದಾಖಲೆ
- News
ಇಂಡಿಗೋ ವಿಮಾನದಲ್ಲಿ tejasvi surya ಎಡವಟ್ಟು, ವ್ಯಾಪಕ ಟ್ರೋಲ್
- Finance
Medicines Price : ಪ್ಯಾರೆಸಿಟಮಾಲ್ ಸೇರಿ 128 ಔಷಧಿಗಳ ದರ ಪರಿಷ್ಕರಣೆ, ಇಲ್ಲಿದೆ ಮಾಹಿತಿ
- Lifestyle
ಈ ರೀತಿಯ ಗುಣವಿರುವ ಹುಡುಗ ಒಳ್ಳೆಯ ಲೈಫ್ ಪಾರ್ಟನರ್ ಆಗಲು ಸಾಧ್ಯವೇ ಇಲ್ಲ
- Movies
Puttakkana Makkalu : ತಲೆ ಸುತ್ತಿ ಬಿದ್ದ ಪುಟ್ಟಕ್ಕ; ರಾಜೇಶ್ವರಿ ಪಿತೂರಿಯನ್ನು ಮಕ್ಕಳ ಬಳಿ ಹೇಳುತ್ತಾಳಾ ಪುಟ್ಟಕ್ಕ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದೇ ಖರೀದಿಸಿ ವಿವೋ Y75 ಸ್ಮಾರ್ಟ್‌ಫೋನ್!..ಭರ್ಜರಿ ಉಳಿತಾಯ!
ವಿವೋ ಕಂಪೆನಿ ಮೀಡ್‌ರೇಂಜ್ ದರದಲ್ಲಿ ಕಳೆದ ವರ್ಷ ಬಿಡುಗಡೆ ಮಾಡಿರುವ ವಿವೋ Y75 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದ್ದು, ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ G96 4G SoC ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವಿವೋ Y75 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 1,000ರೂ. ಕಡಿತವಾಗಿದೆ. ಈ ಪೋನಿನ 8GB RAM + 128GB ವೇರಿಯಂಟ್ ದರವು 20,999ರೂ. ಆಗಿತ್ತು. ಆದರೆ ಬೆಲೆ ಇಳಿಕೆಯಿಂದ ಇದೀಗ 19,999ರೂ.ಗಳಿಗೆ ಇಳಿಕೆ ಕಂಡಿದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಸುಮಾರು 1,500ರೂ. ಗಳ ರಿಯಾಯಿತಿ ಸಹ ದೊರೆಯುತ್ತದೆ. ಹಾಗಾದರೇ ವಿವೋ Y75 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y75 ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ ಎಲ್‌ಸಿಡಿ ಸ್ಕ್ರೀನ್ ಅನ್ನು ಹೊಂದಿದೆ. ಇದು ವೀಡಿಯೋ ಕರೆ ಮತ್ತು ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿದೆ.

ಪ್ರೊಸೆಸರ್ ಪವರ್ ಯಾವುದು?
ವಿವೋ Y75 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G96 4G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್ OS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು 4GB ವರೆಗೆ ವಿಸ್ತರಿಸಬಹುದು. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ವಿವೋ Y75 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 44 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಅಲ್ಟ್ರಾ-ವೈಡ್ ನೈಟ್, ಸೂಪರ್ ಮ್ಯಾಕ್ರೋ, ಪೋರ್ಟ್ರೇಟ್ ಮೋಡ್, ಲೈವ್ ಫೋಟೋ ಮತ್ತು ಬೊಕೆ ಮೋಡ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ವಿವೋ Y75 ಸ್ಮಾರ್ಟ್‌ಫೋನ್ 4,050mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಷ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ v5.2, GPS, BEIDOU, GLONASS, GALILEO, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999ರೂ. ಹೊಂದಿದೆ. ಇನ್ನು ಈ ಫೋನ್ ಡ್ಯಾನ್ಸಿಂಗ್ ವೇವ್ಸ್ ಮತ್ತು ಮೂನ್‌ಲೈಟ್ ಶ್ಯಾಡೋ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470