ವಿವೋ Y75 ಸ್ಮಾರ್ಟ್‌ಫೋನ್‌ ಬಿಡುಗಡೆ! 44W ಫ್ಲ್ಯಾಷ್ ಚಾರ್ಜಿಂಗ್‌ ವಿಶೇ‍ಷ!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ವಿವೋ Y75 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ವಿವೋ Y75

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y75 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಡ್ಯಾನ್ಸಿಂಗ್ ವೇವ್ಸ್ ಮತ್ತು ಮೂನ್‌ಲೈಟ್ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ 20,999ರೂ.ಆರಂಭಿಕ ಬೆಲೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y75 ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ ಎಲ್‌ಸಿಡಿ ಸ್ಕ್ರೀನ್‌ ಅನ್ನು ಹೊಂದಿದೆ. ಇದು ವೀಡಿಯೋ ಕರೆ ಮತ್ತು ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ Y75 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G96 4G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್‌ OS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು 4GB ವರೆಗೆ ವಿಸ್ತರಿಸಬಹುದು. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಪೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಅಲ್ಟ್ರಾ-ವೈಡ್ ನೈಟ್, ಸೂಪರ್ ಮ್ಯಾಕ್ರೋ, ಪೋರ್ಟ್ರೇಟ್ ಮೋಡ್, ಲೈವ್ ಫೋಟೋ ಮತ್ತು ಬೊಕೆ ಮೋಡ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y75 ಸ್ಮಾರ್ಟ್‌ಫೋನ್‌ 4,050mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಷ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ v5.2, GPS, BEIDOU, GLONASS, GALILEO, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್‌ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 20,999ರೂ.ಹೊಂದಿದೆ. ಇನ್ನು ಈ ಫೋನ್ ಡ್ಯಾನ್ಸಿಂಗ್ ವೇವ್ಸ್ ಮತ್ತು ಮೂನ್‌ಲೈಟ್ ಶ್ಯಾಡೋ ಬಣ್ಣಗಳಲ್ಲಿ ಬರುತ್ತದೆ. ಈಗ ಫ್ಲಿಪ್‌ಕಾರ್ಟ್, ವಿವೋ ಇ-ಸ್ಟೋರ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಲು ಲಭ್ಯವಿದೆ. ಇನ್ನು ICICI, SBI, IDFC ಫಸ್ಟ್ ಬ್ಯಾಂಕ್ ಮತ್ತು OneCard ನ ಕಾರ್ಡ್‌ಗಳನ್ನು ಬಳಸಿಕೊಂಡು ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು 1,500ರೂ. ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Vivo Y75 was launched in India on Friday as the latest Y-series smartphone from the Chinese smartphone brand.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X