50MP ಕ್ಯಾಮೆರಾದ ವಿವೋ Y76 5G ಸ್ಮಾರ್ಟ್‌ಫೋನ್ ಲಾಂಚ್‌ಗೆ ದಿನಾಂಕ ನಿಗದಿ!

|

ಪ್ರಮುಖ ಮೊಬೈಲ್ ಕಂಪನಿಗಳಲ್ಲಿ ಒಂದಾದ ವಿವೋ ಮೊಬೈಲ್‌ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಹಾಗೆಯೇ 5G ಮಾಡೆಲ್‌ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಗ್ರಾಹಕರನ್ನು ಸೆಳೆದಿದೆ. ತನ್ನ 5G ಸ್ಮಾರ್ಟ್‌ಫೋನ್‌ಗಳ ಪಟ್ಟಿಗೆ ಈಗ ಮತ್ತೊಂದು ಹೊಸ ಫೋನ್ ಸೇರ್ಪಡೆ ಮಾಡಲು ವಿವೋ ಸಜ್ಜಾಗಿದೆ. ಅದುವೇ ವಿವೋ Y76 5G ಸ್ಮಾರ್ಟ್‌ಫೋನ್.

ವಿವೋ

ಹೌದು, ವಿವೋ ಸಂಸ್ಥೆ ಹೊಸದಾಗಿ ವಿವೋ Y76 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ದಿನಾಂಕ ನಿಗದಿ ಮಾಡಿದ್ದು, ಇದೇ ನವೆಂಬರ್ 23 ರಂದು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಫೋನ್‌ನ ವಿನ್ಯಾಸ ಮತ್ತು ಪ್ರಮುಖ ಫೀಚರ್ಸ್‌ಗಳ ಬಗ್ಗೆ ಟೀಸರ್ ಮೂಲಕ ಬಹಿರಂಗಪಡಿಸಲಾಗಿದೆ. ಈ ಫೋನ್ ಒಟ್ಟು ಮೂರು ಬಣ್ಣಗಳ ಆಯ್ಕೆಯನ್ನು ಹೊಂದಿರಲಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಹಾಗೆಯೇ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆ ಎನ್ನಲಾಗಿದೆ. ಹಾಗಾದರೇ ಬರಲಿರುವ ನೂತನ ವಿವೋ Y76 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y76 5G ಸ್ಮಾರ್ಟ್‌ಫೋನ್ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇಯು 60Hz ರೀಫ್ರೇಶ್ ರೇಟ್ ಅನ್ನು ಪಡೆದಿರಲಿದ್ದು, ಅಧಿಕ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದೆದೆ.

ಪ್ರೊಸೆಸರ್‌ ಬಲ ಯಾವುದು

ಪ್ರೊಸೆಸರ್‌ ಬಲ ಯಾವುದು

ವಿವೋ Y76 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 700 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ 11 ಅನ್ನು ಚಾಲನೆ ಮಾಡುತ್ತದೆ ಎಂದು ಹೇಳಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM + 128GB ಮತ್ತು 8GB + 256GB ಆಂತರೀಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ನೀಡಬಹುದು.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ವಿವೋ Y76 5G ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಕ್ಯಾಮೆರಾವನ್ನು ಹೊಂದಿರಲಿದೆ. ಜೊತೆಗೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಇನ್ನು ಇದರೊಂದಿಗೆ ಫೋಟೊ ಎಡಿಟಿಂಗ್ ಆಯ್ಕೆಗಳನ್ನು ಈ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y76 5G ಸ್ಮಾರ್ಟ್‌ಫೋನ್ 4,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದ್ದು, 44W ಫ್ಲ್ಯಾಶ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಹಾಗೆಯೇ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಆಡಿಯೋ ಜ್ಯಾಕ್ ಆಯ್ಕೆ ಪಡೆದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್, ಅನ್ನು ಬೆಂಬಲಿಸಲಿದೆ.

ಚೀನಾದಲ್ಲಿ

ಹಾಗೆಯೇ ವಿವೋ ಕಂಪನಿಯು ಕಳೆದ ವಾರ ಚೀನಾದಲ್ಲಿ ಬಿಡುಗಡೆ ಮಾಡಿದ ವಿವೋ Y76s ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ OriginOS 1.0 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಡ್ಯುಯಲ್

ವಿವೋ Y76s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಅನ್ನು ಹೊಂದಿದೆ. ಇದಲ್ಲದೆ16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Vivo Y76 5G launch date is November 23, the company has confirmed. This Phone be available in three colour options.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X