ವಿವೋ ಕಂಪೆನಿಯಿಂದ ಹೊಸ ಫೋನ್ ಬಿಡುಗಡೆ!..44W ವೇಗದ ಚಾರ್ಜಿಂಗ್!
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಿನ್ನ ಮಾದರಿಯ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ಸ್ಟೈಲಿಶ್ ಲುಕ್, ಆಕರ್ಷಕ ರಿಯರ್ ಪ್ಯಾನಲ್‌ನಿಂದ ಗಮನಸೆಳೆದಿವೆ. ವಿವೋ ಸ್ಮಾರ್ಟ್‌ಫೋನ್ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆ ಎನಿಸಿಕೊಂಡಿವೆ. ಸದ್ಯ ಇದೀಗ ವಿವೋ ಕಂಪೆನಿ ಹೊಸ ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು 50ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಶೈಲಿಯನ್ನು ಒಳಗೊಂಡಿದೆ. ಇದು 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಯಾವುದು?
ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 OS ಮತ್ತು ಫನ್‌ಟಚ್ OS UI ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ರಿಯರ್ ಕ್ಯಾಮೆರಾದಲ್ಲಿ ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್?
ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಪೋರ್ಟ್ ಅನ್ನು ಪಡೆದಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ರೈಟ್ ಸೈಡ್‌ನಲ್ಲಿರುವ ಪವರ್ ಬಟನ್ ಅನ್ನು ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನೊಂದಿಗೆ ಸಂಯೋಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y76s (t1 ಎಡಿಷನ್) ಸ್ಮಾರ್ಟ್‌ಫೋನ್ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಚೀನಾದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ 1,899 ಯುವಾನ್ (ಅಂದಾಜು 21,753ರೂ) ಹೊಂದಿದೆ. ಇದು ಸ್ಟಾರ್ ಡೈಮಂಡ್ ವೈಟ್, ಗ್ಯಾಲಕ್ಸಿ ವೈಟ್ ಮತ್ತು ಸ್ಟಾರಿ ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಭಾರತಕ್ಕೆ ಎಂಟ್ರಿ ನೀಡುವ ಸಾಧ್ಯತೆಯಿದೆ.


Click it and Unblock the Notifications








