Home
ಸುದ್ದಿಜಾಲ

ವಿವೋ Y76s ಸ್ಮಾರ್ಟ್‌ಫೋನ್‌ ಲಾಂಚ್‌! 44W ವೇಗದ ಚಾರ್ಜಿಂಗ್ ವಿಶೇಷ!

ವಿವೋ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ವಿಭಿನ್ನ ಕ್ಯಾಮೆರಾ ಶೈಲಿ ಹಾಗೂ ಡಿಸ್‌ಪ್ಲೇ ವಿನ್ಯಾಸದಿಂದ ಗ್ರಾಹಕರ ನೆಚ್ಚಿನ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಸದ್ಯ ವಿವೋ ಕಂಪೆನಿ ಇದೀಗ ಹೊಸ ವಿವೋ Y76s ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು 50-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಒಳಗೊಂಡ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ 44W ವೇಗದ ಚಾರ್ಜಿಂಗ್ ಬೆಂಬಲಿಸುವ 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 16 ಗಂಟೆಗಳ 4G ಟಾಕ್‌ಟೈಮ್ ನೀಡಲಿದೆ ಎಂದು ಹೇಳಲಾಗಿದೆ.

ವಿವೋ Y76s ಸ್ಮಾರ್ಟ್‌ಫೋನ್‌

ಹೌದು, ವಿವೋ ಕಂಪೆನಿ ಹೊಸ ವಿವೋ Y76s ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಇದು ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಹೊಂದಿದೆ. ಇದು ಹಿಂಭಾಗದಲ್ಲಿ ಗ್ರೇಡಿಯಂಟ್ ಫಿನಿಶ್ ಜೊತೆಗೆ ಮೂರು ವಿಭಿನ್ನ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y76s ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90.61% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ವಿವೋ Y76s ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ OriginOS 1.0 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ Y76s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು ಮ್ಯಾಕ್ರೋ ಫೋಟೋಗ್ರಫಿ ಸೂಕ್ತವಾದ ವಿನ್ಯಾಸ ಹೊಂದಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y76s ಸ್ಮಾರ್ಟ್‌ಫೋನ್‌ 4,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸಿಂಗಲ್‌ ಚಾರ್ಜ್‌ನಲ್ಲಿ 16 ಗಂಟೆಗಳ 4G ಟಾಕ್‌ಟೈಮ್ ಅನ್ನು ತಲುಪಿಸಲು ರೇಟ್ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G VoLTE, Wi-Fi, ಬ್ಲೂಟೂತ್ v5.1, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y76s ಸ್ಮಾರ್ಟ್‌ಫೋನ್‌ ಚೀನಾದಲ್ಲಿ 8GB RAM + 128GB ಸ್ಟೋರೇಜ್ ರೂಪಾಂತದ ಆಯ್ಕೆಗೆ CNY 1,799 (ಸುಮಾರು 20,800ರೂ)ಬೆಲೆ ನಿಗದಿಪಡಿಸಲಾಗಿದೆ. ಇದಲ್ಲದೆ 8GB + 256GB ಆಯ್ಕೆಗೆ CNY 1,999 (ಸುಮಾರು ರೂ. 23,200)ಬೆಲೆ ಹೊಂದಿದೆ. ಇದು ಪ್ರಸ್ತುತ ವಿವೋ ಚೀನಾ ವೆಬ್‌ಸೈಟ್‌ನಲ್ಲಿ ಗ್ಯಾಲಕ್ಸಿ ಬ್ಲೂ, ಸ್ಟಾರ್ ಡೈಮಂಡ್ ವೈಟ್ ಮತ್ತು ಸ್ಟಾರ್ರಿ ನೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಪಟ್ಟಿಮಾಡಲಾಗಿದೆ. ಇದು ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಮಾಹಿತಿ ಇನ್ನು ಕೂಡ ಸ್ಪಷ್ಟವಾಗಿಲ್ಲ.

Best Mobiles in India

English summary
Vivo Y76s has debuted as the latest model in the company's Y-series.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+