ಮಾರುಕಟ್ಟೆಗೆ ಹೊಸ 'ವಿವೋ Y77 5G' ಫೋನ್‌ ಎಂಟ್ರಿ; ಭರ್ಜರಿ ಫೀಚರ್ಸ್‌!

|

ವಿವೋ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ಕ್ಯಾಮೆರಾ ಫೀಚರ್ಸ್‌ ಡಿಸ್‌ಪ್ಲೇ ರಚನೆಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಇದೀಗ ಹೊಸ ವಿವೋ Y77 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 930 ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ.

ಅಲ್ಟ್ರಾ

ಹೌದು, ವಿವೋ ಕಂಪೆನಿ ಹೊಸ ವಿವೋ Y77 5G ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ವಿವೋ ವೈ-ಸರಣಿಯ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಅಲ್ಲದೆ ಇದು ಅಮೋಲೆಡ್‌ ಡಿಸ್‌ಪ್ಲೇ ಮತ್ತು ಅಧಿಕ RAM ಸೌಲಭ್ಯ ವೇರಿಯಂಟ್ ಅನ್ನು ಹೊಂದಿದೆ, ಇದು ಕೆಲಸದ ದಕ್ಷತೆಯನ್ನು ಹೆಚ್ಚಿಸುತ್ತದೆ.

ಆಕರ್ಷಿಸಿದೆ

ಈ ಫೋನ್ 12GB + 256GB ಸ್ಟೋರೇಜ್‌ ಸಾಮರ್ಥ್ಯದ ಹೈ ಎಂಡ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ನೊಂದಿಗೆ 80W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಇದು ಒಳಗೊಂಡಿದ್ದು, ಫೋನ್‌ ಪ್ರಿಯರನ್ನು ಆಕರ್ಷಿಸಿದೆ. ಹಾಗಾದರೇ ವಿವೋ Y77 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ಅನುಪಾತ

ಡಿಸ್‌ಪ್ಲೇ ರಚನೆ ಮತ್ತು ಅನುಪಾತ

ವಿವೋ Y77 5G ಸ್ಮಾರ್ಟ್‌ಫೋನ್‌ 2388 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.64 ಇಂಚಿನ ಪೂರ್ಣ ಎಚ್‌ಡಿ + ಎಲ್‌ಸಿಡಿ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರೀಫ್ರೇಶ್ ರೇಟ್ ಸಾಮರ್ಥ್ಯವನ್ನು ಹೊಂದಿದ್ದು, ಹಾಗೆಯೇ 1500:1 ಕಾಂಟ್ರಾಸ್ಟ್‌ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ವಿವೋ Y77 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 930 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ಓಎಸ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ ನಾಲ್ಕು ವೇರಿಯಂಟ್ ಮಾದರಿಗಳೊಂದಿಗೆ ಬಿಡುಗಡೆ ಆಗಿದ್ದು, ಅವುಗಳು ಕ್ರಮವಾಗಿ 6GB + 128 GB, 8GB + 128 GB, 8GB + 256 GB ಮತ್ತು 12GB + 256 GB ಆಗಿವೆ.

ಡ್ಯುಯಲ್ ಕ್ಯಾಮೆರಾ ವಿಶೇಷ

ಡ್ಯುಯಲ್ ಕ್ಯಾಮೆರಾ ವಿಶೇಷ

ವಿವೋ Y77 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮೈಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y77 5G ಸ್ಮಾರ್ಟ್‌ಫೋನ್‌ 4500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 5G, ವೈಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸೇರಿವೆ. ಜೊತೆಗೆ ಟೈಪ್-ಸಿ ಪೋರ್ಟ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಒಳಗೊಂಡಿದೆ. ಹಾಗೆಯೇ ಇದು 164.17 × 75.8 × 8.59mm ಅಳತೆ ಹೊಂದಿದ್ದು, ಜೊತೆಗೆ 194 ಗ್ರಾಂ ತೂಕ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y77 5G ಸ್ಮಾರ್ಟ್‌ಫೋನ್‌ 8GB RAM + 128GB ಬೆಲೆಯು RMB 1,499 (ಭಾರತದಲ್ಲಿ ಅಂದಾಜು 17,700ರೂ.), 8GB + 128GB ವೇರಿಯಂಟ್ ದರವು RMB 1,599 (ಭಾರತದಲ್ಲಿ ಅಂದಾಜು 18,900ರೂ), 8GB + 256GB ವೇರಿಯಂಟ್ ದರವು RMB 1,799 (ಭಾರತದಲ್ಲಿ ಅಂದಾಜು 21,300ರೂ) ಹಾಗೂ 12GB + 256GB ವೇರಿಯಂಟ್ ಮಾಡೆಲ್‌ ಬೆಲೆಯು RMB 1,999 (ಭಾರತದಲ್ಲಿ ಅಂದಾಜು 23,600ರೂ) ಎನ್ನಲಾಗಿದೆ. ಇನ್ನು ಈ ಫೋನ್ ಕಪ್ಪು, ನೀಲಿ ಮತ್ತು ಗುಲಾಬಿ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ ಮೊಬೈಲ್‌ ಕಂಪನಿಯು ಇತ್ತೀಚಿಗೆ ಭಾರತೀಯ ಮಾರುಕಟ್ಟೆಗೆ ನೂತನವಾಗಿ ವಿವೋ T1 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಫೋನ್ 1,080 x 2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಜೊತೆಗೆ ರನ್ ಆಗುತ್ತದೆ. ಹಾಗೆಯೇ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ.

ಪಿಕ್ಸೆಲ್

ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66W ಫ್ಲ್ಯಾಶ್‌ಚಾರ್ಜ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇನ್ನು ಈ ಸ್ಮಾರ್ಟ್‌ಫೋನ್‌ ಟರ್ಬೊ ಬ್ಲ್ಯಾಕ್ ಮತ್ತು ಟರ್ಬೊ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Vivo Y77 5G: highlights of the smartphone include a 50MP camera setup, a 120Hz display, and 80W fast charging support.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X