ವಿವೋ Y77e 5G ಸ್ಮಾರ್ಟ್‌ಫೋನ್ ಬಿಡುಗಡೆ! 25 ದಿನಗಳ ಸ್ಟ್ಯಾಂಡ್ ಬೈ ಬ್ಯಾಟರಿ!
ಟೆಕ್ ವಲಯದ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದೆ. ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ತಮ್ಮ ಆಕರ್ಷಕ ವಿನ್ಯಾಸ ಹಾಗೂ ಕ್ಯಾಮೆರಾ ವಿಶೇಷತೆ ಕಾರಣದಿಂದಾಗಿ ಸಾಕಷ್ಟು ಗಮನಸೆಳೆದಿವೆ. ಈಗಾಗಲೇ ಹಲವು ಮಾದರಿಯ ಫೋನ್‌ಗಳನ್ನು ಪರಿಚಯಿಸಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ವಿವೋ ಕಂಪೆನಿ ತನ್ನ ಹೊಸ ವಿವೋ Y77e 5G ಸ್ಮಾರ್ಟ್‌ಫೋನ್ ಅನ್ನು ಸೈಲೆಂಟ್ ಆಗಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಒಳಗೊಂಡ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y77e 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯ್ಲಿ ಬರಲಿದೆ. ಜೊತೆಗೆ 18W ಫ್ಲ್ಯಾಷ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y77e 5G ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು 90.61% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೈಖರಿ ಹೇಗಿದೆ?
ವಿವೋ Y77e 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಆಧಾರಿತ OriginOS ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ Mali G57 GPU ಸಪೋರ್ಟ್ ಅನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೊರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನು?
ವಿವೋ Y77e 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ, 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ HDR, ಮಲ್ಟಿಲೇಯರ್ ಭಾವಚಿತ್ರ, ಸ್ಲೋ ಮೋಷನ್, ಪನೋರಮಾ, ಲೈವ್ ಫೋಟೋ ಮತ್ತು ಸೂಪರ್ ನೈಟ್ ಮೋಡ್ ಫೀಚರ್ಸ್ ಅನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ವಿವೋ Y77e 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ ಬ್ಯಾಟರಿಯು 25 ದಿನಗಳವರೆಗೆ ಸ್ಟ್ಯಾಂಡ್‌ಬೈ ಸಮಯವನ್ನು ನೀಡುತ್ತದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ WLAN, 4G LTE, Wi-Fi, ಬ್ಲೂಟೂತ್ v5.1, GPS, Glonass, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪ್ರಸ್ತುತ ಈ ಸ್ಮಾರ್ಟ್‌ಫೋನ್ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನಿನ 8GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಯು CNY 1,699 (ಸುಮಾರು 20,000ರೂ) ಬೆಲೆಯನ್ನು ಹೊಂದಿದೆ. ಈ ಫೋನ್ ಕ್ರಿಸ್ಟಲ್ ಬ್ಲ್ಯಾಕ್, ಕ್ರಿಸ್ಟಲ್ ಪೌಡರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








