ವಿವೋ Y77t ಸ್ಮಾರ್ಟ್‌ಫೋನ್ ಬಿಡುಗಡೆ; ಪ್ರೊಸೆಸರ್ ಕಾರ್ಯದಕ್ಷತೆ ಹೇಗಿದೆ ಗೊತ್ತಾ?
ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿ ಸೈ ಎನಿಸಿಕೊಂಡಿದೆ. ಪ್ರತಿ ಸ್ಮಾರ್ಟ್‌ಫೋನ್‌ಗಳಲ್ಲಿಯೂ ವಿವಿಧ ಕ್ಯಾಮೆರಾ ವಿನ್ಯಾಸವನ್ನು ನೀಡುತ್ತಾ ಬಂದಿದೆ. ಅದರ ಮುಂದುವರೆದ ಭಾಗವಾಗಿ ಹೊಸ ವಿವೋ Y77t ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ವಿವೋ Y77t ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y77t ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y77t ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2388 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸಲಿದೆ.
ವಿವೋ Y77t ಪ್ರೊಸೆಸರ್ ಸಾಮರ್ಥ್ಯ
ವಿವೋ Y77t ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ OriginOS 3ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯ ಬಗ್ಗೆ ಯಾವುದೇ ಮಾಹಿತಿಯಿಲ್ಲ.
ವಿವೋ Y77t ಕ್ಯಾಮೆರಾ ಸೆಟ್‌ಅಪ್
ವಿವೋ Y77t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಲೆನ್ಸ್ ಜೊತೆಗೆ LED ಫ್ಲಾಷ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಕ್ಯಾಮೆರಾವನ್ನು ಡಿಸ್‌ಪ್ಲೇಯ ಮೇಲ್ಭಾಗದಲ್ಲಿ ಮಧ್ಯದಲ್ಲಿ ಜೋಡಿಸಲಾದ ರಂಧ್ರ-ಪಂಚ್ ಸ್ಲಾಟ್‌ನಲ್ಲಿ ಇರಿಸಲಾಗಿದೆ.
ವಿವೋ Y77t ಬ್ಯಾಟರಿ ಮತ್ತು ಇತರೆ ಫೀಚರ್ಸ್
ವಿವೋ Y77t ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, Wi-Fi 6, ಬ್ಲೂಟೂತ್ 5.2, GPS ಮತ್ತು USB ಟೈಪ್-C ಸಂಪರ್ಕವನ್ನು ಸಹ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 3.5 ಎಂಎಂ ಆಡಿಯೊ ಜಾಕ್‌ನೊಂದಿಗೆ ಬರುತ್ತದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಕಂಪಾಸ್ ಅನ್ನು ಹೊಂದಿದೆ.
ವಿವೋ Y77t ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ವಿವೋ Y77t ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಇದೀಗ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 1,399 (ಸುಮಾರು 16,000ರೂ) ಬೆಲೆ ಹೊಂದಿದೆ. ಇನ್ನು 12GB RAM ಮತ್ತು 256GB ಸ್ಟೋರೇಜ್ ಆಯ್ಕೆಯು CNY 1,599 (ಸುಮಾರು 18,000ರೂ)ಬೆಲೆಯಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, Jade Porcelain Blue ಮತ್ತು Phoenix Feather Gold ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಯಾವಾಗ ಎಂಟ್ರಿ ನೀಡಲಿದೆ ಅನ್ನೊದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








