Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ Y78m ಸ್ಮಾರ್ಟ್‌ಫೋನ್‌.. ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಎಷ್ಟಿದೆ?

ವಿವೋ ಕಂಪೆನಿ ಕ್ಯಾಮೆರಾ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಎಂದೆನಿಸಿಕೊಂಡಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇದೀಗ ಹೊಸ ವಿವೋ Y78m ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ಹೌದು, ವಿವೋ Y78m ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ವಿವೋ Y78m ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ Y78m ಸ್ಮಾರ್ಟ್‌ಫೋನ್‌!

ವಿವೋ Y78m ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y78m ಸ್ಮಾರ್ಟ್‌ಫೋನ್‌ 6.64 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2388 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 19.9:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 1500:1 ಕಾಂಟ್ರಾಸ್ಟ್ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ DCI-P3 ಕಲರ್‌ ಗ್ಯಾಮಟ್‌, 120Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಈ ಡಿಸ್‌ಪ್ಲೇ 91.06% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ನೀಡಲಿದೆ.

ವಿವೋ Y78m ಪ್ರೊಸೆಸರ್‌ ಯಾವುದು?
ವಿವೋ Y78m ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7020SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌13 ಮತ್ತು FunTouch OS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128 GB ಹಾಗೂ 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ವಿವೋ Y78m ಕ್ಯಾಮೆರಾ ಸೆಟ್‌ಅಪ್‌
ವಿವೋ Y78m ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ವಿವೋ Y78m ಬ್ಯಾಟರಿ ಮತ್ತು ಇತರೆ
ವಿವೋ Y78m ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, Wi-Fi 6, ಬ್ಲೂಟೂತ್ 5.2, GPS, NFC, USB-C ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್‌ ಒಳಗೊಂಡಿದೆ.

ವಿವೋ Y78m ಬೆಲೆ ಮತ್ತು ಲಭ್ಯತೆ
ವಿವೋ Y78m ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ 12GB+256GB ಆವೃತ್ತಿಗೆ ಚೀನಾದಲ್ಲಿ 1,999 ಯುವಾನ್ (ಅಂದಾಜು 22,963ರೂ) ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ನೀಲಿ ಬಣ್ಣಗಳ ಆಯ್ಕೆಗಳಲ್ಲಿ ದೊರೆಯಲಿದೆ.

ಇನ್ನು ಇತ್ತೀಚಿಗೆ ವಿವೋ V29e ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.73 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್‌ ಓಎಸ್‌ ಅನ್ನು ರನ್‌ ಮಾಡಲಿದೆ. ಇನ್ನು ಈ ಫೋನ್ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಅದರಲ್ಲಿ 64 ಮೆಗಾಪಿಕ್ಸೆಲ್ OIS ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, 44W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Vivo Y78m with 50MP dual cameras launched: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+