ವಿವೋ Y78t ಸ್ಮಾರ್ಟ್‌ಫೋನ್ ಬಿಡುಗಡೆ! ಬಿಗ್ ಬ್ಯಾಟರಿ ಬ್ಯಾಕ್‌ಅಪ್!
ಸೆಲ್ಫಿ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ವಿವೋ ಕಂಪೆನಿ ಹೊಸ ಫೋನ್ ಪರಿಚಯಿಸಿದೆ. ಇದನ್ನು ವಿವೋ Y78t ಸ್ಮಾರ್ಟ್‌ಫೋನ್ ಎಂದು ಗುರುತಿಸಲಾಗಿದ್ದು, ವಿಶೇಷ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಹೊಂದಿದೆ.
ಹೌದು, ವಿವೋ Y78t ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಹಾಗಾದ್ರೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y78t ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y78t ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,388 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 394ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 85.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.
ವಿವೋ Y78t ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ Y78t ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 4nm ಸ್ನಾಪ್‌ಡ್ರಾಗನ್ 6 Gen SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ OriginOS 3 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ವಿವೋ Y78t ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ Y78t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ವಿವೋ Y78t ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ Y78t ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ 5.1, GPS, Beidou, Glonass, Galileo, QZSS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಇ-ಕಂಪಾಸ್ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿವೆ.

ವಿವೋ Y78t ಬೆಲೆ ಮತ್ತು ಲಭ್ಯತೆ
ವಿವೋ Y78t ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಆಯ್ಕೆಗೆ ಚೀನಾದಲ್ಲಿ CNY 1,499 (ಸುಮಾರು 17,000ರೂ) ಬೆಲೆಯನ್ನು ಹೊಂದಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ ವಿವರಗಳು ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ ಮೂನ್ ಶ್ಯಾಡೋ ಬ್ಲ್ಯಾಕ್, ಸ್ನೋಯಿ ವೈಟ್ ಮತ್ತು ಡಿಸ್ಟೆನ್ಸ್ ಮೌಂಟೇನ್ಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಯಾವಾಗ ಕಾಲಿಡಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








