3GB RAM ಸಾಮರ್ಥ್ಯದ Vivo Y91i ಸ್ಮಾರ್ಟ್‌ಫೋನ್‌ ಬಿಡುಗಡೆ!

|

ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿರುವ ಕೆಲವೇ ಕಂಪೆನಿಗಳಲ್ಲಿ ಒಂದಾಗಿದೆ. ಸದ್ಯ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ವಿವೋ ತನ್ನ ಜನಪ್ರಿಯ Y ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ Y91i ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ Y91i ಸರಣಿಯ 3GB RAM ಮತ್ತು 32GB ಆಂತರಿಕ ಸಾಮರ್ಥ್ಯದ ಆಯ್ಕೆಯ ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯನ್ನ ಹೊಂದಿದ್ದು, 7,990 ರೂಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ವಿವೋ Y91i ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 439SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y91i ಸ್ಮಾರ್ಟ್‌ಫೋನ್‌ 1520x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.22 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್‌ನಾಚ್‌ ಸೆಲ್ಫಿ ಕ್ಯಾಮೆರಾ ಶೈಲಿಯನ್ನ ಒಳಗೊಂಡಿದೆ. ಇನ್ನು ಇದರ ರಚನೆಯ ಅನುಪಾತ 19.9 ಆಗಿದ್ದು, ಉತ್ತಮ ಡಿಸ್‌ಪ್ಲೇ ಪಿಕ್ಸೆಲ್‌ ರೆಸಲ್ಯೂಶನ್‌ ಸಾಂದ್ರತೆಯನ್ನ ಹೊಂದಿದೆ. ಇದಲ್ಲಿದೆ ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಿಗೆ ಬೇಕಾದ ಉತ್ತಮ, ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌‌ ಆಕ್ಟಾಕೋರ್‌ CPU ಹೊಂದಿರುವ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 493 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 3GB RAM ಮತ್ತು 32GB ಆಂತರಿಕ ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ. ಆದರೆ ಎಷ್ಟು GB ಪ್ರಮಾಣದಲ್ಲಿರಲಿದೆ ಅನ್ನೊದನ್ನ ಕಂಪೆನಿ ಇನ್ನು ಬಹಿರಂಗ ಪಡಿಸಿಲ್ಲ.

ಕ್ಯಾಮೆರಾ

ಕ್ಯಾಮೆರಾ

ಇನ್ನು ವಿವೋ Y91i ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ವಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದಲ್ಲದೆ ಕ್ಯಾಮೆರಾ ಸೆಟ್‌ಅಪ್‌ನ ಗುಣಮಟ್ಟಕ್ಕಾಗಿ AI ಫೀಚರ್ಸ್‌ ಅನ್ನು ಅಳವಡಿಸಲಾಗಿದೆ.

ಬ್ಯಾಟರಿ ಮತ್ತು ಬೆಲೆ

ಬ್ಯಾಟರಿ ಮತ್ತು ಬೆಲೆ

ಈ ಸ್ಮಾರ್ಟ್‌ಫೋನ್‌ 4,030mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, GPS, ಮೈಕ್ರೋ ಯುಎಸ್‌ಬಿ ಪೋರ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಆಕ್ಸಿಲೆರೊಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲಯನ್ನ ಹೊಂದಿದ್ದು, 7,990 ರೂ,ಗಳಿಗೆ ಲಭ್ಯವಾಗಲಿದೆ.

Best Mobiles in India

English summary
The Vivo Y91i will compete with the likes of Xiaomi, Realme, and Nokia in this segment. Now, let’s have a closer look at the specifications of this Y91i variant.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X