vivo: ಬಜೆಟ್ ಬೆಲೆಯ ವಿವೋದ ಈ ಫೋನ್‌ಗೆ ಈ ಪರಿ ರಿಯಾಯಿತಿಯೇ! ಡ್ಯುಯಲ್ ಕ್ಯಾಮೆರಾ
ವಿವೋ (vivo) ಫೋನ್‌ಗಳಿಗೂ ಭಾರತೀಯರಿಗೂ ಒಂದು ರೀತಿಯ ನಂಟು. ಈ ಕಾರಣಕ್ಕೆ ಈ ಫೋನ್‌ಗಳನ್ನು ಹೆಚ್ಚಾಗಿ ಖರೀದಿ ಮಾಡುತ್ತಾರೆ. ಅದರಲ್ಲೂ ಈ ಫೋನ್‌ಗಳ ಕ್ಯಾಮೆರಾ ಫೀಚರ್ಸ್ ಎಂದರೆ ಬಹುಪಾಲು ಜನರಿಗೆ ಇಷ್ಟ. ಅದರಂತೆ ವಿವೋದ ಈ ಹಳೆಯ ಫೋನ್‌ವೊಂದನ್ನು ಭರ್ಜರಿ ಆಫರ್ ಘೋಷಣೆ ಮಾಡಲಾಗಿದೆ.
ಹೌದು, ವಿವೋ Y95 ಸ್ಮಾರ್ಟ್‌ಫೋನ್ (Vivo Y95 smartphone) ಇದೀಗ ಭಾರೀ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 13 ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 4030 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ಬೆಲೆ ವಿವರ ಎಷ್ಟು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ವಿವೋ Y95 ಸ್ಮಾರ್ಟ್‌ಫೋನ್ ಅಫರ್ ವಿವರ: ಈ ಫೋನ್ 18,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 11,890 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಪ್ರಮುಖ ಇ-ಕಾಮರ್ಸ್‌ಸೈಟ್ ಆಗುರುವ ಫ್ಲಿಪ್‌ಕಾರ್ಟ್ (Flipkart) ಈ ಫೋನ್‌ಗೆ 37% ರಿಯಾಯಿತಿ ಘೋಷಣೆ ಮಾಡಿದೆ. ಅಂದರೆ ನೀವು ಈ ಫೋನ್ ಖರೀದಿ ವೇಳೆ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಇದರೊಂದಿಗೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಇಎಂಐ ವಹಿವಾಟುಗಳ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮತ್ತು ಇಎಮ್‌ಐ ವಹಿವಾಟುಗಳ ಮೇಲೆ 10% ರಿಯಾಯಿತಿ ಸಿಗಲಿದೆ. ಇದರೊಂದಿಗೆ ವಿಶೇಷ ಬೆಲೆ ಹೆಚ್ಚುವರಿ 1100 ರೂ.ಗಳ ರಿಯಾಯಿತಿ ಸಹ ಲಭ್ಯ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್ ಏನು ಅನ್ನೋದನ್ನು ಗಮನಿಸೋಣ ಬನ್ನಿ.

ವಿವೋ Y95 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.22 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 720 x 1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 82.9% ಸ್ಕ್ರೀನ್-ಟು-ಬಾಡಿ ಅನುಪಾತ 270 ppi ಸಾಂದ್ರತೆಯೊಂದಿಗೆ ಬಳಕೆದಾರರಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.
ವಿವೋ Y95 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಫೋನ್ ಕ್ವಾಲ್ಕಾಮ್ SDM439 ಸ್ನಾಪ್ಡ್ರಾಗನ್ 439 (12 nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 8.1 (ಓರಿಯೊ), ಫನ್‌ಟಚ್ 4.5 ಓಎಸ್ ಅನ್ನು ರನ್ ಮಾಡಲಿದೆ. ಇದರೊಂದಿಗೆ ಅಡ್ರಿನೊ 505 ಗ್ರಾಫಿಕ್ಸ್ ಕಾರ್ಡ್‌ನೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಅಲ್ಲದೆ 64GB ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 4GB RAM ಸ್ಟೋರೇಜ್ ಬಲದೊಂದಿಗೆ ಇಂಟರ್ ಸ್ಟೋರೇಜ್ ಅನ್ನು ವಿಸ್ತರಣೆ ಮಾಡಬಹುದಾದ ಆಯ್ಕೆ ಸಹ ಇದೆ.
ವಿವೋ Y95 ಸ್ಮಾರ್ಟ್‌ಫೋನ್ ಕ್ಯಾಮೆರಾ ಸಾಮರ್ಥ್ಯ: ಇನ್ನು ಈ ಬಜೆಟ್ ಬೆಲೆಯ ಫೋನ್ 13 ಮೆಗಾಪಿಕ್ಸೆಲ್, f/2.2, PDAF ಮುಖ್ಯ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್ f/2.4 ಡೀಪ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಆಯ್ಕೆಯನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ. ಉಳಿದಂತೆ ಈ ಫೋನ್ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ವಿವೋ Y95 ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಈ ಫೋನ್ 4030 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ವೈ-ಫೈ 802.11 b/g/n, ವೈ-ಫೈ ಡೈರೆಕ್ಟ್ ಬ್ಲೂಟೂತ್ ಆವೃತ್ತಿ 4.2, A2DP, LE, ಎಫ್‌ಎಮ್ ರೇಡಿಯೋ, ಮೈಕ್ರೋ ಯುಎಸ್‌ಬಿ 2.0, ಓಟಿಜಿ ಕನೆಕ್ಟಿವಿಟಿ ಬೆಂಬಲ ಪಡೆದಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸರ್ ಸೇರಿದಂತೆ ವಿವಿಧ ಆಕರ್ಷಕ ಭದ್ರತಾ ಫೀಚರ್ಸ್ ಅನ್ನು ಕಾಣಬಹುದಾಗಿದೆ.


Click it and Unblock the Notifications








