Just In
Don't Miss
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Automobiles
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವೋ ಸಂಸ್ಥೆಯಿಂದ 'ವಿವೋ Y9s' ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಕಂಪೆನಿ ವಿವೋ ಇತ್ತೀಚಿಗಷ್ಟೇ ವಿವೋ ವಿ17 ಬಿಡುಗಡೆ ಮಾಡಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಇದೀಗ ಕಂಪನಿಯು ವಿವೋ Y9s ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಚೀನಾದಲ್ಲಿ ಅನಾವರಣಗೊಂಡಿರುವ ಹೊಸ ವಿವೋ ಫೋನ್ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ, ಡೈಮಂಡ್ ಆಕಾರದ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಗ್ರೇಡಿಯಂಟ್ ಬ್ಯಾಕ್ ವೈಶಿಷ್ಟ್ಯತೆಯಿಂದ ಗಮನಸೆಳೆಯುತ್ತಿದೆ.

ಹೌದು, ವಿವೋ ಕಂಪನಿಯು ಹೊಸದಾಗಿ 'ವಿವೋ Y9s' ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 48 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ, 32ಎಂಪಿ ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳೊಂದಿಗೆ 4,500mAh ಸಾಮರ್ಥ್ಯ ಬಿಗ್ ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಹಾಗಾದರೇ ವಿವೋ Y9s ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಈ ಲೇಖನವನ್ನ ಓದಿರಿ.

ಡಿಸ್‌ಪ್ಲೇ ರಚನೆ
ವಿವೋ Y9s ಸ್ಮಾರ್ಟ್‌ಫೋನ್ 1080x2340 ಫಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.38-ಇಂಚಿನ Super AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 19.5:9 ಅನುಪಾತವನ್ನ ಹೊಂದಿದೆ. ಡಿಸ್‌ಪ್ಲೇಯ ಸ್ಕ್ರೀನ್ ಟು ಬಾಡಿ ನಡುವಿನ ಅಂತರವು ಶೇ 90 % ಆಗಿದ್ದು, ವಾಟರ್‌ಡ್ರಾಪ್ ಸ್ಟೈಲ್ ನಾಚ್ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ ಸಹ ಇದೆ.

ಪ್ರೊಸೆಸರ್ ಸಾಮರ್ಥ್ಯ
ವಿವೋ Y9s ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 9 ಓಎಸ್ ನ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಹೊಂದಿದ್ದು, ಮೆಮೊರಿ ಕಾರ್ಡ್ ಮೂಲಕ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ
ವಿವೋ Y9s ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು ವಜ್ರಾಕೃತಿಯನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾ 48 ಮೆಗಾಪಿಕ್ಸೆಲ್ ಆಗಿದ್ದು F/ 1.8 ಲೆನ್ಸ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ ಅಲ್ಟ್ರಾ-ವೈಡ್-ಆಂಗಲ್ F/ 2.2 ಲೆನ್ಸ್ ಹೊಂದಿದೆ. ಇನ್ನು 3 ಮತ್ತು 4ನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹೊಂದಿದ್ದು ಎರಡೂ ಕೂಡ F/ 2.4 ಲೆನ್ಸ್ ಒಳಗೊಂಡಿವೆ. ಇದಲ್ಲದೆ, ವಿವೋ Y9s ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, F/ 2.0 ಲೆನ್ಸ್ ಹೊಂದಿದೆ.

ವಿವೋ Y9s ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಒದಗಿಸಿದ್ದು ಅದು 18W ಡ್ಯುಯಲ್ ಎಂಜಿನ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು ವಿವೋ ವೈ 9 ಎಸ್ ಬೆಲೆ 20,400 ರೂ.ಆಗಿದ್ದು ಡಿಸೆಂಬರ್ 6 ರಿಂದ ಚೀನಾದಲ್ಲಿ ಖರೀದಿಗೆ ಲಭ್ಯವಿದ್ದು ಕಪ್ಪು, ನೆಬ್ಯುಲಾ ಬ್ಲೂ ಮತ್ತು ಸಿಂಫನಿ ಆಫ್ ಲೈಟ್ ಕಲರ್ ನಲ್ಲಿ ದೊರೆಯಲಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190