Home
ಸುದ್ದಿಜಾಲ

Vivo: ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಆಫರ್! ಟ್ರಿಪಲ್ ಕ್ಯಾಮೆರಾ

ವಿವೋ ಫೋನ್‌ಗಳು (Vivo phone) ಇತ್ತೀಚೆಗಂತೂ ಹೆಚ್ಚು ಸೇಲ್‌ ಆಗುವ ಮೂಲಕ ಇತರೆ ಸ್ಮಾರ್ಟ್‌ಫೋನ್‌ಗಳಿಗೆ ನಡುಕ ಹುಟ್ಟುವಂತೆ ಮಾಡಿವೆ. ಅದರಲ್ಲೂ ವಿವೋದ ಹಳೆಯ ಬಜೆಟ್‌ ಫೋನ್‌ಗಳಿಗೂ ಸಹ ಬೇಡಿಕೆ ಇದ್ದು, ಈ ಕಾರಣಕ್ಕೆ ಪ್ರಮುಖ ಇ-ಕಾಮರ್ಸ್‌ ಸೈಟ್‌ಗಳಲ್ಲಿ ಇವುಗಳಲ್ಲಿ ವಿವಿಧ ರೀತಿಯ ಕೊಡುಗೆ ಘೋಷಣೆ ಮಾಡಲಾಗಿದೆ.

ಹೌದು, ವಿವೋ Z1 ಪ್ರೊ ಸ್ಮಾರ್ಟ್‌ಫೋನ್‌ (Vivo Z1 Pro smartphone) ಅನ್ನು ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ 64 ಜಿಬಿ ಇಂಟರ್‌ ಸ್ಟೋರೇಜ್‌ನೊಂದಿಗೆ ವಿಸ್ತರಣೆ ಮಾಡಬಹುದಾದ ಸೌಲಭ್ಯವನ್ನೂ ಸಹ ಹೊಂದಿದೆ. ಅಲ್ಲದೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆಯುವ ಮೂಲಕ ಕ್ಯಾಮೆರಾ ಪ್ರಿಯರ ನೆಚ್ಚಿನ ಫೋನ್‌ ಆಗಿ ಗುರುತಿಸಿಕೊಂಡಿದೆ. ಹಾಗಿದ್ರೆ ಬನ್ನಿ ಈ ಸ್ಮಾರ್ಟ್‌ಫೋನ್‌ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರ ತಿಳಿಯೋಣ.

Vivo: ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಆಫರ್! ಟ್ರಿಪಲ್ ಕ್ಯಾಮೆರಾ

ವಿವೋ Z1 ಪ್ರೊ ಸ್ಮಾರ್ಟ್‌ಫೋನ್: ಈ ಫೋನ್ 15,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವು ಈಗ ಆಫರ್ ಬೆಲೆ 13,990 ರೂ.ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಅಂದರೆ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಈ ಫೋನ್‌ಗೆ 12% ರಿಯಾಯಿತಿ ನೀಡಲಾಗಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಲು ಮುಂದಾದರೆ ಇನ್ನೂ ಅಗ್ಗದ ದರದಲ್ಲಿ ಈ ಫೋನ್‌ ನಿಮ್ಮದಾಗಿಸಿಕೊಳ್ಳಬಹುದಾಗಿದೆ.

ಬ್ಯಾಂಕ್‌ ಆಫ್‌ ಬರೋಡಾ ಕಾರ್ಡ್‌ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 10% ರಿಯಾಯಿತಿ ಸಿಗಲಿದೆ. ಇದರೊಂದಿಗೆ ಬ್ಯಾಂಕ್‌ ಆಫ್‌ ಬರೋಡಾ ಕಾರ್ಡ್‌ ಮೂಲಕ ಇಎಂಐನಲ್ಲಿ ಖರೀದಿ ಮಾಡಲು ಮುಂದಾದರೂ 10% ರಿಯಾಯಿತಿ ಹಾಗೂ ಸಿಟಿ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್ ಇಎಂಐ ವ್ಯವಹಾರದ ಮೇಲೆ 10% ರಿಯಾಯಿತಿ ಸಿಗಲಿದೆ. ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಖರೀದಿ ಮಾಡಬಹುದು. ಹಾಗಿದ್ರೆ, ಈ ಸ್ಮಾರ್ಟ್‌ಫೋನ್ ಫೀಚರ್ಸ್‌ ಏನು ಅನ್ನೋದನ್ನು ತಿಳಿಯೋಣ.

Vivo: ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಆಫರ್! ಟ್ರಿಪಲ್ ಕ್ಯಾಮೆರಾ

ವಿವೋ Z1 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.53 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಇದು 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 83.4% ಸ್ಕ್ರೀನ್-ಟು-ಬಾಡಿ ಅನುಪಾತ ಹಾಗೂ 395 ಪಿಪಿಐ ಸಾಂದ್ರತೆಯೊಂದಿಗೆ ಬೆಲೆಗೆ ತಕ್ಕ ವೀಕ್ಷಣೆ ಅನುಭವ ನೀಡಲಿದೆ.

ವಿವೋ Z1 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್‌ ವಿವರ: ಈ ಫೋನ್ ಆಂಡ್ರಾಯ್ಡ್ 9.0 (ಪೈ), ಆಂಡ್ರಾಯ್ಡ್ 10 ನಲ್ಲಿ ಲಭ್ಯ ಇದ್ದು, ಫನ್‌ಟಚ್ 10 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ. ಜೊತೆಗೆ ಕ್ವಾಲ್ಕಾಮ್ ಎಸ್‌ಡಿಎಂ712 ಸ್ನಾಪ್ಡ್ರಾಗನ್ 712 (10 ಎನ್‌ಎಂ) ಪ್ರೊಸೆಸರ್‌ ಬಲದೊಂದಿಗೆ ಕಾರ್ಯನಿರ್ವಹಿಸಲಿದ್ದು, ಅಡ್ರಿನೊ 616 ಜಿಪಿಯುನೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದೆ. ಹಾಗೆಯೇ ಆಫರ್ ಬೆಲೆಗೆ ಲಭ್ಯ ಇರುವ ಈ ಫೋನ್ 4ಜಿಬಿ RAM ಹಾಗೂ 64 ಜಿಬಿ ಇಂಟರ್‌ ಸ್ಟೋರೇಜ್‌ನೊಂದಿಗೆ ಕಾಣಿಸಿಕೊಂಡಿದೆ.

Vivo: ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಆಫರ್! ಟ್ರಿಪಲ್ ಕ್ಯಾಮೆರಾ

ವಿವೋ Z1 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಇದರಲ್ಲಿ 16 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಹಾಗೂ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸರ್‌ ಹೊಂದಿದೆ. ಹಾಗೆಯೇ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ನೋಡಬಹುದು. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಪಡೆದಿವೆ.

ವಿವೋ Z1 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 ಎಂಎಹೆಚ್‌ ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 18 ವ್ಯಾಟ್ಸ್‌ ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಹಾಗೆಯೇ 3.5 ಎಂಎಂ ಜ್ಯಾಕ್, ವೈ-ಫೈ 802.11 ಎ/ಬಿ/ಜಿ/ಎನ್‌/ಎಸಿ ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, ಎ2ಡಿಪಿ, ಎಲ್‌ಇ, ಜಿಪಿಎಸ್‌ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್‌ ಪಡೆದಿದೆ.

Best Mobiles in India

English summary
Vivo Z1 Pro smartphone can be purchased at an offer price. The phone also comes with 64GB internal storage which is expandable.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+