ವಿವೋ Z5x(2020) ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ವಿವೋ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇನ್ನು ವಿವೋ ಕಂಪೆನಿ ಈಗಾಗಲೇ ಹಲವು ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಸ್ಮಾರ್ಟ್‌ಫೋನ್‌

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ತನ್ನ ಹೊಸ ವಿವೋ Z5x ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಿವೋ Z5x ನ ಅಪ್‌ಗ್ರೇಡ್ ಆವೃತ್ತಿಯಾಗಿ ಬಿಡುಗಡೆ ಮಾಡಲಾಗಿದೆ. ಇನ್ನು ಇದರ ಮೂಲ ಆವೃತ್ತಿಯ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 710 SoC ಪ್ರೊಸೆಸರ್‌ ಅನ್ನು ಒಳಗೊಂಡಿತ್ತು, ಆದರೆ ಇದೀಗ ಹೊಸ ಆಪ್ಡೇಟ್‌ ಆವೃತ್ತಿಯ ವಿವೋ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 712 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಹಾಗೂ ಇದರ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Z5x ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಇದು 90.78% ಸ್ಕ್ರಿನ್‌ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 712 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Z5x ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು,ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್, GPS, ಮೈಕ್ರೋ-ಯುಎಸ್‌ಬಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ರಿಯರ್‌ ಫಿಂಗರ್‌ಪ್ರಿಮಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

Best Mobiles in India

English summary
Vivo Z5x (2020) has been launched as an upgraded version of the original Vivo Z5x that debuted last year.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X