Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ Z6 5G ಸ್ಮಾರ್ಟ್‌ಫೋನ್‌ !

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ವಿವೋ ಈಗಾಗ್ಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದೀಗ ವಿವೋ Z6 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದಾ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ವಿವೋ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದ್ದು, ವಿವೋ Z6 5G ಮಾರುಕಟ್ಟೆಯಲ್ಲಿ ಕಮಾಲ್‌ ಮಾಡುವ ಸಾಧ್ಯತೆ ಇದೆ.

ಹೌದು

ಹೌದು, ವಿವೋ ಕಂಪೆನಿಯ ಬಹುನಿರೀಕ್ಷಿತ ವಿವೋ Z6 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದಲ್ಲದೆ ಇದು ಸ್ಮಾರ್ಟ್‌ಫೋನ್‌ನ ತಾಪಮಾನವನ್ನ ತಗ್ಗಿಸಲು ಕಾಪರ್‌ ಕಾಯಿಲ್‌ ಮತ್ತು ಥರ್ಮಲ್‌ ಜೆಲ್‌ ಒಳಗೊಂಡ ಲಿಕ್ವೀಡ್‌ ಕೂಲಿಂಗ್‌ ಟೆಕ್ನಾಲಜಿಯನ್ನ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಪಂಚ್‌ಹೋಲ್‌‌ ಡಿಸೈನ್‌ ಅನ್ನು ಒಳಗೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ವಿವೋ Z6 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.57 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಇದು ಪಂಚ್‌ಹೋಲ್‌ ವಿನ್ಯಾಸವನ್ನ ಒಳಗೊಂಡಿದ್ದು, ಡಿಸ್‌ಪ್ಲೇ ರಚನೆ 20:9 ಅನುಪಾತವನ್ನ ಒಳಗೊಂಡಿದೆ. ಇನ್ನು ಬಾಡಿ ಟು ಡಿಸ್‌ಪ್ಲೇ 90.74% ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 401PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಶೇಕರಣಾ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ವಿವೋ Z6 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಮೆಗಾ ಪಿಕ್ಸೆಲ್‌ f/1.79 ಲೆನ್ಸ್‌, ಎರಡನೇ ಕ್ಯಾಮೆರಾ 8ಮೆಗಾ ಪಿಕ್ಸೆಲ್‌ ವೈಡ್‌ ಆಂಗಲ್‌ ಲೆನ್ಸ್‌ , ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಮ್ಯಾಕ್ರೋ ಶೂಟರ್‌ ಲೆನ್ಸ್‌ ಹಾಗೂ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿವೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸರ್ಕ್ಯೂಲರ್‌ ಹೋಲ್‌ ಪಂಚ್‌ ವಿನ್ಯಾಸದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 44w ಸೂಪರ್ ಫ್ಲ್ಯಾಶ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ. ಅಲ್ಲದೆ ಇದು ಕೇವಲ 35 ನಿಮಿಷಗಳಲ್ಲಿ ಬ್ಯಾಟರಿಯನ್ನು 0 ರಿಂದ 70% ಚಾರ್ಜಿಂಗ್‌ ಮಾಡಿರುತ್ತದೆ ಎಂದು ಕಂಪೆನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, & 5G ಡ್ಯುಯೆಲ್‌ ಮೋಡ್‌, ಬ್ಲೂಟೂತ್‌ 5.1, ಜಿಪಿಎಸ್‌, ಯುಎಸ್‌ಬಿ ಟೈಪ್‌ -ಸಿ ಪೊರ್ಟ್‌, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Z6 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಯ್ಕೆಗೆ CNY 2,198 (ಅಂದಾಜು 22,000.ರೂ) ಬೆಲೆಯಿದೆ. ಹಾಗೂ 8GB RAM ಮತ್ತು 128GB ಮಾದರಿಗೆ CNY 2598 (ಅಂದಾಜು 26,000.ರೂ) ಬೆಲೆಯನ್ನು ಹೊಂದಿದೆ. ಇದು ಇಂಟರ್ ಸ್ಟೆಲ್ಲರ್ ಸಿಲ್ವರ್ ಮತ್ತು ಐಸ್ ಏಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದ್ದು, ಇದೇ ಫೆಬ್ರವರಿ 29 ರಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Z6 price starts at CNY 2,198 (roughly Rs. 22,000) for the phone's base 6GB +128GB variant.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+