Home
ಸುದ್ದಿಜಾಲ

ವಿ ಟೆಲಿಕಾಂನ 199ರೂ. ಪ್ಲ್ಯಾನ್‌ನಲ್ಲಿ ಈಗ ಅಧಿಕ ಡೇಟಾ ಮತ್ತು ವ್ಯಾಲಿಡಿಟಿ!

ವೊಡಾಫೋನ್ ಐಡಿಯಾ (ವಿ ಟೆಲಿಕಾಂ) ಸಂಸ್ಥೆಯು ಇತ್ತೀಚಿಗೆ ಇತರೆ ಟೆಲಿಕಾಂ ಸಂಸ್ಥೆಗಳಿಗೆ ನೇರವಾಗಿ ಪೈಪೋಟಿ ನೀಡುವ ಯೋಜನೆಗಳನ್ನು ಪರಿಚಯಿಸುತ್ತ ಸಾಗಿದೆ. ಈ ನಿಟ್ಟಿನಲ್ಲಿ ಕಂಪನಿಯು ಈಗಾಗಲೇ ಕೆಲವು ಅಗ್ಗದ ದರದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಇದೀಗ ವಿ ಟೆಲಿಕಾಂ ತನ್ನ ಅಗ್ಗದ ಪ್ರೀಪೇಯ್ಡ್‌ ಪ್ಲ್ಯಾನ್‌ವೊಂದನ್ನು ಪರಿಷ್ಕರಿಸಿದ್ದು, ಈ ಆಕರ್ಷಕ ಪ್ರಯೋಜನ ಒದಗಿಸಿದೆ.

ಟೆಲಿಕಾಂ

ಹೌದು, ವಿ ಟೆಲಿಕಾಂ ಇದೀಗ ತನ್ನ ಜನಪ್ರಿಯ 199ರೂ.ಗಳ ಪ್ರೀಪೇಯ್ಡ್‌ ಪ್ಲ್ಯಾನ್‌ ಅನ್ನು ಪರಿಷ್ಕರಣೆ ಮಾಡಿದೆ. ಕಂಪನಿಯು ಈ ಯೋಜನೆಯಲ್ಲಿ ಡೇಟಾ ಜೊತೆಗೆ ವ್ಯಾಲಿಡಿಟಿ ಸೌಲಭ್ಯಗಳನ್ನು ಹೆಚ್ಚಳ ಮಾಡಿದೆ. ಹಾಗಾದರೇ ವಿ ಟೆಲಿಕಾಂ 199ರೂ. ಪ್ರೀಪೇಯ್ಡ್‌ ಯೋಜನೆಯ ಪ್ರಯೋಜನಗಳೆನು ಹಾಗೂ ಇತರೆ ಅಗ್ಗದ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್‌-ಐಡಿಯಾ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್‌-ಐಡಿಯಾ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್‌-ಐಡಿಯಾ ಟೆಲಿಕಾಂನ 199ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಇದೀಗ ಒಟ್ಟು 28 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಈ ಮೊದಲು 24 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಿತ್ತು. ಹಾಗೆಯೇ ಈ ಯೋಜನೆಯಲ್ಲಿ ಮೊದಲು ಪ್ರತಿದಿನ 1GB ಡೇಟಾ ಸೌಲಭ್ಯವಿತ್ತು, ಆದ್ರೆ ಈಗ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ವೊಡಾಫೋನ್-ಐಡಿಯಾ 299ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ 299ರೂ. ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
Vodafone Idea offers its Rs 199 plan with 1GB of daily data for 24 days to the users.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+