ವೊಡಾಫೋನ್‌ನಿಂದ 819ರೂ. ಹೊಸ ಪ್ಲ್ಯಾನ್; ಪ್ರತಿದಿನ 2GB ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್ ಸಂಸ್ಥೆಯು ಹಲವು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಪ್ರತಿದಿನ 1.5GB ಮತ್ತು 2GB ಡೇಟಾ ಪ್ರಯೋಜನದ ಪ್ಲ್ಯಾನ್‌ಗಳನ್ನು ಗ್ರಾಹಕರಿಗೆ ಪರಿಚಯಿಸಿದೆ. ಇದೀಗ ವೊಡಾಫೋನ್ ಮತ್ತೊಂದು ಪ್ರೀಪೇಯ್ಡ್ ಯೋಜನೆಯನ್ನು ಬಿಡುಗಡೆ ಮಾಡಿದ್ದು, 1.5GB ಗಿಂತಲೂ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಸೂಕ್ತ ಅನಿಸಲಿದೆ.

ಹೌದು, ವೊಡಾಫೋನ್ ಟೆಲಿಕಾಂ ಹೊಸದಾಗಿ 819ರೂ. ಪ್ರೀಪೇಯ್ಡ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಯೋಜನೆಯು ಪ್ರತಿದಿನ 2GB ಡೇಟಾ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಇದರೊಂದಿಗೆ ಜೀ ಪ್ರೀಮಿಯಂ OTT ವಿಡಿಯೊ ಸ್ಟ್ರೀಮಿಂಗ್ ಸೌಲಭ್ಯವನ್ನು ಸಹ ಪಡೆದಿದೆ. ಇನ್ನು ಅಧಿಕ ವ್ಯಾಲಿಡಿಟಿ ಸೌಲಭ್ಯ ಬಯಸುವ ಚಂದಾದಾರರಿಗೆ ಈ ಹೊಸ ಯೋಜನೆಯು ಹೆಚ್ಚು ಉಪಯುಕ್ತವಾಗಲಿದೆ. ಹಾಗಾದರೇ ಈ ಯೋಜನೆಯ ಪ್ರಯೋಜನಗಳ ಬಗ್ಗೆ ಇನ್ನುಷ್ಟು ಮಾಹಿತಿಗಾಗಿ ಮುಂದೆ ಓದಿರಿ.

ವೊಡಾಫೋನ್ 819ರೂ.ಪ್ಲ್ಯಾನ್
ವೊಡಾಫೋನಿನ 819ರೂ.ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಹೊಂದಿದ್ದು, ಪ್ರತಿದಿನ 2GB ಡೇಟಾ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನವನ್ನು ಪಡೆದಿದೆ. ಹೆಚ್ಚುವರಿಯಾಗಿ ಒಂದು ವರ್ಷದ ಜೀ ಪ್ರೀಮಿಯಂ ಸದಸ್ಯತ್ವ ಸಹ ದೊರೆಯಲಿದೆ.

ವೊಡಾಫೋನ್ 299ರೂ. ಪ್ಲ್ಯಾನ್
ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನಿನ 499ರೂ. ಪ್ಲ್ಯಾನ್
ವೊಡಾಫೋನಿನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 699ರೂ. ಪ್ಲ್ಯಾನ್
ವೊಡಾಫೋನಿನ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಒಟ್ಟು 168GB ಡೇಟಾ ಲಭ್ಯ.


Click it and Unblock the Notifications








