ಅಗ್ಗದ ಬೆಲೆಗೆ ಕ್ವಾಡ್ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಇಲ್ಲಿವೆ ಬೆಸ್ಟ್ ಆಯ್ಕೆ!
ಭಾರತೀಯ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಲಗ್ಗೆ ಇಟ್ಟಿದ್ದು, ಅವುಗಳಲ್ಲಿ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಇವೆ. ಆದರೆ ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಬಹುತೇಕ ಗ್ರಾಹಕರು ಬಜೆಟ್ ಪ್ರೈಸ್‌ನಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್ ಕೊಳ್ಳಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಷ್ಠಿತ ಕಂಪನಿಗಳು ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ.

ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಡಿಮ್ಯಾಂಡ್ ಹೆಚ್ಚಿದೆ. ಸದ್ಯ ವೇಗದ ಪ್ರೊಸೆಸರ್, ಕ್ವಾಡ್ ಕ್ಯಾಮೆರಾ, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ನಂತಹ ಇತ್ತೀಚಿಗಿನ ಫೀಚರ್ಸ್‌ಗಳಿರುವ ಫೋನ್‌ಗಳು ಗ್ರಾಹಕರನ್ನು ಹೆಚ್ಚು ಅಟ್ರ್ಯಾಕ್ಟ್ ಮಾಡುತ್ತವೆ. ಮುಖ್ಯವಾಗಿ ಬಜೆಟ್ ದರದಲ್ಲಿ ಸ್ಯಾಮ್‌ಸಂಗ್, ಶಿಯೋಮಿ, ರಿಯಲ್‌ಮಿ, ವಿವೋ ಹಾಗೂ ಮೊಟೊ ಸಂಸ್ಥೆಗಳ ಫೋನ್‌ಗಳು ಗ್ರಾಹಕರ ನೆಚ್ಚಿನ ಮೊಬೈಲ್ ಬ್ರ್ಯಾಂಡ್‌ಗಳಾಗಿವೆ. ಹಾಗಾದರೇ ಬಜೆಟ್ ದರದಲ್ಲಿ ಲಭ್ಯವಿರುವ ಕ್ವಾಡ್ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಪೊಕೊ M2 ಪ್ರೊ
ಪೊಕೊ M2 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಉಳಿದಂತೆ ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಈ ಫೋನಿನ ಬೇಸ್ ವೇರಿಯಂಟ್ ಬೆಲೆಯು 12,999ರೂ. ಆಗಿದೆ.

ರಿಯಲ್‌ಮಿ 7
ರಿಯಲ್ ಮಿ 7 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮೊದಲ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಪಡೆದಿದ್ದು, 30W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದರ ಆರಂಭಿಕ ದರವು 14,592ರೂ.ಆಗಿದೆ.

ರೆಡ್ಮಿ ನೋಟ್ 9 ಪ್ರೊ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ವಿನ್ಯಾಸವನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್ ಆಂಗಲ್ ಲೆನ್ಸ್ ಹೊಂದಿದೆ. ಹಾಗೆಯೇ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಉಳಿದಂತೆ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 12,999ರೂ. ಆಗಿದೆ.

ರಿಯಲ್‌ಮಿ 7i
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಕಾಣಿಸಿಕೊಂಡಿದ್ದು, ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯ ಪ್ರಮುಖ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದ್ದು, ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.ಈ ಪೋನಿನ ಬೇಸ್ ವೇರಿಯಂಟ್ ದರವು 11,999ರೂ. ಆಗಿದೆ.

ರೆಡ್ಮಿ 9 ಪವರ್
ಶಿಯೋಮಿ ಸಂಸ್ಥೆಯ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಆರಂಭಿಕ ವೇರಿಯಂಟ್ ಬೆಲೆಯು 10,999ರೂ. ಆಗಿದೆ.


Click it and Unblock the Notifications