ಡಿಸ್ಕೌಂಟ್ ಬೆಲೆಗೆ ಮೊಟೊ 5G ಫೋನ್ ಖರೀದಿಸಬೇಕೆ?..ಈ ಆಫರ್ ಗಮನಿಸಿ!
ಮೊಟೊರೊಲಾ ಮೊಬೈಲ್ ಸಂಸ್ಥೆಯು ತನ್ನ G ಸರಣಿಯಲ್ಲಿ ಹಲವು 5G ಫೋನ್‌ಗಳನ್ನು ಪರಿಚಯಿಸಿದೆ. ಅವುಗಳ ಪೈಕಿ ಮೊಟೊರೊಲಾ G34 5G ಬಜೆಟ್ ದರದಲ್ಲಿ ಲಾಂಚ್ ಆಗಿತ್ತು ಹಾಗೆಯೇ ಗ್ರಾಹಕರ ಗಮನ ಸೆಳೆದಿತ್ತು. ಇದೀಗ ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದಿದ್ದು, ಅಗ್ಗದ ದರದಲ್ಲಿ ಖರೀದಿ ಮಾಡಬಹುದು.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ G34 5G ಮೊಬೈಲ್ ಶೇ. 21% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 10,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್ನಷ್ಟು ಡಿಸ್ಕೌಂಟ್ ಸಹ ಲಭ್ಯವಾಗಲಿದೆ.

ಈ ಫೋನ್ ಕ್ವಾಲ್ಕಾಮ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಹೊಂದಿದೆ. ಇನ್ನು ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಹ ಹೊಂದಿದೆ. ಇನ್ನುಳಿದಂತೆ ಮೊಟೊರೊಲಾ G34 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಮೊಟೊರೊಲಾ G34 5G ಫೀಚರ್ಸ್ ಮಾಹಿತಿ
ಮೊಟೊರೊಲಾ G34 5G ಮೊಬೈಲ್ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಪಂಚ್-ಹೋಲ್ ವಿನ್ಯಾಸದೊಂದಿಗೆ ಫ್ಲಾಟ್ ಡಿಸ್‌ಪ್ಲೇ ಎನಿಸಿಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದ್ದು, 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದರ ಜೊತೆಗೆ ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಮೊಟೊರೊಲಾ G34 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 8GB ವರ್ಚುವಲ್ RAM ನಿಂದ ಸೌಲಭ್ಯ ಸಹ ಇದೆ. ಇದರೊಂದಿಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.
ಮೊಟೊರೊಲಾ G34 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇದರ ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ಒದಗಿಸಲಾಗಿದೆ.
ಮೊಟೊರೊಲಾ G34 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ. ಇದು USB-C ಪೋರ್ಟ್ ಮೂಲಕ 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5, GPS, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಮೊಟೊರೊಲಾದ ಈ ಫೋನ್‌ಡಾಲ್ಬಿ ಅಟ್ಮಾಸ್-ಟ್ಯೂನ್ಡ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಹೊಂದಿದೆ. ಜೊತೆಗೆ ಇದು 4GB + 128GB ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಸ್ಟಾರ್ ಬ್ಲ್ಯಾಕ್ ಮತ್ತು ಸೀ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ.


Click it and Unblock the Notifications








