ರೆಡ್ಮಿ ಮೊಬೈಲ್‌ ಖರೀದಿಸುವ ಗ್ರಾಹಕರೇ, ಅವಸರ ಬೇಡಾ!..ಇಲ್ಲಿ ಗಮನಿಸಿ!

|

ಭಾರತದಲ್ಲಿ ಶಿಯೋಮಿ ಸಂಸ್ಥೆಯು ಪ್ರಮುಖ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಭಿನ್ನ ಬೆಲೆಯ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಶಿಯೋಮಿ ಕಂಪನಿಯು ಗ್ರಾಹಕರನ್ನು ಸೆಳೆದಿದೆ. ರೆಡ್ಮಿ ನೋಟ್ ಸರಣಿಯ ಫೋನ್‌ಗಳು ಹಾಗೂ ರೆಡ್ಮಿ K ಸರಣಿಯ ಫೋನ್‌ಗಳು ಹೆಚ್ಚು ಅಟ್ರ್ಯಾಕ್ಟ್ ಮಾಡಿದ್ದು, ಇವುಗಳ ಡಿಸೈನ್ ಹಾಗೂ ಕಾರ್ಯವೈಖರಿ ಸಹ ಬಳಕೆದಾರರಿಗೆ ಉತ್ತಮ ಎನಿಸಿದೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಅಬ್ಬರಿಸಿದ್ದು, ಇತ್ತೀಚಿನ ಕೆಲವು ಫೋನ್‌ಗಳು ಉತ್ತಮ ಡಿಮ್ಯಾಂಡ್‌ ಪಡೆದಿವೆ. ನೀವೇನಾದರೂ ಸದ್ಯ ಹೊಸದಾಗಿ ಶಿಯೋಮಿ ಸಂಸ್ಥೆಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದುಕೊಂಡಿದ್ದೀರಾ?..ಒಂದು ವೇಳೆ ಖರೀದಿಸುವ ಯೋಚನೆಯ ಇದ್ರೆ, ಈ ಲೇಖನದಲ್ಲಿ ನೀಡಿರುವ ಕೆಲವು ಉತ್ತಮ ಶಿಯೋಮಿ ಫೋನ್‌ಗಳ ಮಾಹಿತಿ ನಿಮಗೆ ಉಪಯುಕ್ತ ಎನಿಸಬಹುದು. ಮುಂದೆ ಓದಿರಿ.

ರೆಡ್ಮಿ ನೋಟ್‌ 12 5G ಫೋನ್‌

ರೆಡ್ಮಿ ನೋಟ್‌ 12 5G ಫೋನ್‌

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 128GB, 4GB RAM + 128GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಆಗಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಪಡೆದಿರುವ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌

ಈ ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ K50i ಸ್ಮಾರ್ಟ್‌ಫೋನ್

ರೆಡ್ಮಿ K50i ಸ್ಮಾರ್ಟ್‌ಫೋನ್

ಈ ಫೋನ್‌ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 20.5:9 ರಚನೆಯನ್ನು ಹೊಂದಿದ್ದು, ಜೊತೆಗೆ 144Hz ರಿಫ್ರೇಶ್‌ ರೇಟ್‌ ಅನ್ನು ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 12 ಓಎಸ್‌ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ 8GB + 256GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ 5,080mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ.

Best Mobiles in India

English summary
Here is few best Redmi smartphones list. before buying new phone, know about these redmi phones. know more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X