Home
ಸುದ್ದಿಜಾಲ

ಎಚ್ಚರ!..ಮೊಬೈಲ್ ಬಳಕೆಯಿಂದ ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ ಮಕ್ಕಳು!!

ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳು ಯಾವುವು? ಮತ್ತು ಅದಕ್ಕೆ ಪರಿಹಾರ ಏನು ಎಂಬುದನ್ನು ತಿಳಿಯಿರಿ.!

By Bhaskar N J

ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳು ಮಧುಮೇಹ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂಬ ಶಾಕಿಂಗ್ ವರದಿ ಇತ್ತೀಚಿಗಷ್ಟೆ ಹೊರಬಿದ್ದಿತ್ತು. ಆದರೆ, ನೂತನ ಅಧ್ಯಯನ ಪ್ರಕಾರ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳು ಮಧುಮೇಹ ರೋಗಕ್ಕೆ ಮಾತ್ರವಲ್ಲದೆ ಮಾನಸಿಕ ರೋಗಕ್ಕೂ ಸಹ ತುತ್ತಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.!!

ಮೊಬೈಲ್ ಎಂಬ ಮಾಯಾ ಜಗತ್ತು ಮಕ್ಕಳ ಮನಸ್ಸು ಮತ್ತು ಆರೋಗ್ಯವನ್ನು ಹೇಗೆ ಹಾಳುಮಾಡುತ್ತಿದೆ ಎಂದು ಈ ವರದಿಯಲ್ಲಿ ಹೇಳಲಾಗಿದ್ದು, ಹಾಗಾದರೆ, ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳು ಯಾವುವು? ಮತ್ತು ಅದಕ್ಕೆ ಪರಿಹಾರ ಏನು ಎಂಬುದನ್ನು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!

10,000 ಮಕ್ಕಳ ಮೇಲೆ ಅಧ್ಯಯನ!!

10,000 ಮಕ್ಕಳ ಮೇಲೆ ಅಧ್ಯಯನ!!

ಮೊಬೈಲ್ ಮಕ್ಕಳ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರಬಹುದು ಎನ್ನುವುದನ್ನು ತಿಳಿಯುವುದರ ಸಲುವಾಗಿ 10,000 ಕ್ಕೂ ಹೆಚ್ಚು ಮಕ್ಕಳ ಮೇಲೆ ನಿಗಾವಹಿಸಿ ಅಧ್ಯಯನ ವರದಿ ಸಿದ್ದಪಡಿಸಲಾಗಿದೆ. ವರದಿಯಲ್ಲಿ ಮೊಬೈಲ್‌ನಿಂದ ಮಕ್ಕಳ ಮಾನಸಿಕ ಮತ್ತು ದೇಹಾರೋಗ್ಯ ಎರಡೂ ಹಾಳಾಗುತ್ತದೆ ಎಂದು ತಿಳಿಸಲಾಗಿದೆ.!!

ಮೊಬೈಲ್‌ನಿಂದ ನಿದ್ರಾ ವ್ಯವಸ್ಥೆಗೆ ತೊಂದರೆ.!!

ಮೊಬೈಲ್‌ನಿಂದ ನಿದ್ರಾ ವ್ಯವಸ್ಥೆಗೆ ತೊಂದರೆ.!!

ಮಾನವನ ದೇಹಕ್ಕೆ ಅಗತ್ಯ ಪ್ರಮಾಣದಷ್ಟು ನಿದ್ರೆ ಬೇಕು. ಮಕ್ಕಳಿಗೆ ಇನ್ನು ಹೆಚ್ಚಿನ ನಿದ್ರೆ ಇದ್ದರೆ ಉತ್ತಮ. ಆದರೆ, ಹೆಚ್ಚು ಮೊಬೈಲ್ ಬಳಕೆ ಮಾಡುವ ಮಕ್ಕಳ ನಿದ್ರಾ ವ್ಯವಸ್ಥೆಯಲ್ಲಿ ಶೇ.50 ಪರ್ಸೆಂಟ್‌ಗಿಂತಲೂ ಹೆಚ್ಚು ಬದಲಾವಣೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.!

ಮಕ್ಕಳಲ್ಲಿ ನರಗಳ ಬೆಳವಣಿಗೆಯಲ್ಲಿ ತೊಂದರೆ.!!

ಮಕ್ಕಳಲ್ಲಿ ನರಗಳ ಬೆಳವಣಿಗೆಯಲ್ಲಿ ತೊಂದರೆ.!!

ಮಕ್ಕಳ ನರಮಂಡಲದ ರಚನೆ ಇನ್ನೂ ಬೆಳವಣಿಗೆ ಹಂತದಲ್ಲಿರುವಾಗ ಮೊಬೈಲ್ ಬಳಕೆ ಮಾಡಿದರೆ ಮಕ್ಕಳ ನರಗಳು ಶಕ್ತಿಹೀನವಾಗುತ್ತವೆ. ಇದರಿಂದಾಗಿ ಮುಂದೆ ಸ್ಮರಣ ಶಕ್ತಿ ಮತ್ತು ದೃಷ್ಟಿ ಮೇಲೆ ಸಮಸ್ಯೆಗಳು ತಲೆದೂರಬಹುದು ಎಂದು ಸಂಶೋಧನೆ ತಿಳಿಸಿದೆ.!!

ಮೊಬೈಲ್‌ನಿಂದ ಮಾನಸಿಕ ಒತ್ತಡ.!!

ಮೊಬೈಲ್‌ನಿಂದ ಮಾನಸಿಕ ಒತ್ತಡ.!!

ಮಕ್ಕಳು ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತದೆ ಈ ವರದಿ.! ಸಾಮಾಜಿಕ ಮಾಧ್ಯಮಗಳಿಂದ ಹರಡುವ ಸುದ್ದಿಗಳು, ಇತರ ಜೀವನದ ಫ್ಯಾಶನ್, ಜಾಹಿರಾತುಗಳು ಮಕ್ಕಳ ಮನಸ್ಸಿನ ಮೇಲೆ ಒತ್ತಡ ತರುತ್ತವೆ ಎಂದು ಎಲ್ಲಾ ವರದಿಗಳು ಹೇಳುತ್ತವೆ.!!

ಪ್ರೀತಿಯೇ ಔಷದ.!!

ಪ್ರೀತಿಯೇ ಔಷದ.!!

ಮಕ್ಕಳ ಮೇಲೆ ಮೊಬೈಲ್ ಹಾಗೂ ಸಾಮಾಜಿಕ ಮಾಧ್ಯಮಗಳು ಬೀರುತ್ತಿರುವ ಕೆಟ್ಟ ಪ್ರಬಾವವನ್ನು ತಡೆಯಲು ಪ್ರೀತಿಗಿಂತ ಬೇರೊಂದು ಲಸಿಕೆ ಇಲ್ಲ ಎಂದು ಎಲ್ಲಾ ವರದಿಗಳು ಹೇಳುತ್ತವೆ. ಮಕ್ಕಳಿಗೆ ಪ್ರೀತಿಯ ಜೊತೆಗೆ ವಾಸ್ತವ ಪ್ರಪಂಚದ ಬಗ್ಗೆ ಅರಿವು ಮೂಡಿಸುವ ಕಾರ್ಯ ಪೋಷಕರಿಂದ ಆಗಬೇಕಿದೆ.!!

Best Mobiles in India

English summary
Effects of Mobile Phones on Children. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+