Budget 2024: ತಂತ್ರಜ್ಞಾನ ಕ್ಷೇತ್ರಕ್ಕೆ ಈ ಬಜೆಟ್‌ನಿಂದ ಲಾಭಗಳೇನು? ಇಲ್ಲಿದೆ ವಿವರ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ 2024 (Budget 2024) ಮಂಡನೆ ಆಗಿದ್ದು, ಇದನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಇತರೆ ಕ್ಷೇತ್ರಗಳಂತೆ ಟೆಕ್ ವಲಯಕ್ಕೂ ವಿಶೇಷ ನೀತಿಗಳನ್ನು ಘೋಷಣೆ ಮಾಡಿದ್ದಾರೆ.
ಹೌದು, ಭಾರತದ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ವೇಗಗೊಳಿಸುವ ಉದ್ದೇಶದಿಂದ ಈ ಬಜೆಟ್ ಅನ್ನು ಘೋಷಣೆ ಮಾಡಲಾಗಿದೆ. ಇದರಲ್ಲಿ ಇವಿ ಮೂಲ ಸೌಕರ್ಯವನ್ನು ಹೆಚ್ಚಿಸುವ ಮತ್ತು ರಕ್ಷಣಾ ವಲಯದಲ್ಲಿ ತಂತ್ರಜ್ಞಾನವನ್ನು ಆಳವಾಗಿ ಬಳಕೆ ಮಾಡಿಕೊಳ್ಳುವ ಬಗ್ಗೆ ಒತ್ತಿ ಹೇಳಲಾಗಿದೆ. ಹಾಗಿದ್ರೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ?, ಇದರಿಂದ ಏನೆಲ್ಲಾ ಲಾಭ ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ತಂತ್ರಜ್ಞಾನ ಕ್ಷೇತ್ರಕ್ಕೆ ಏನೆಲ್ಲಾ ಕೊಡುಗೆ?: ಈ ಮಧ್ಯಂತರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು 1 ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರೀಕರಣದ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸಲು ಗುರಿ ಹೊಂದಲಾಗಿದೆ. ಅಲ್ಲದೆ ಈ ಪ್ಲ್ಯಾನ್ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಐತಿಹಾಸಿಕ ದಿನದಂದು ಪ್ರಧಾನ ಮಂತ್ರಿಯವರ ಸಂಕಲ್ಪವನ್ನು ಅನುಸರಿಸುತ್ತದೆ ಎಂದು ಉಲ್ಲೇಖ ಮಾಡಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸರ್ವೋದಯ ಯೋಜನೆಯಡಿ ಇದೇ ರೀತಿಯ ಘೋಷಣೆ ಮಾಡಿದ್ದರು. ಈ ಕ್ರಮವು ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ವಿದ್ಯುತ್ ಬಿಲ್‌ಗಳಲ್ಲಿ ಉಳಿತಾಯ ಮಾಡುವ ಸೌಲಭ್ಯ ಕಲ್ಪಿಸಿಕೊಡುತ್ತಿತ್ತು. ಅದರಂತೆ ಈಗ ಮಾಡಲಾದ ಹೊಸ ಘೋಷಣೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಕ್ಕೆ ವರ್ಧಿತ ಹೂಡಿಕೆಗೆ ಕಾರಣವಾಗುತ್ತದೆ ಎನ್ನಲಾಗಿದೆ.

ಇದರೊಂದಿಗೆ ಎಲೆಕ್ಟ್ರಿಕ್ ವೆಹಿಕಲ್ (EV) ಪರಿಸರ ವ್ಯವಸ್ಥೆಯಲ್ಲಿ ಹೆಚ್ಚಿನ ಹೂಡಿಕೆಗಳನ್ನು ಸಹ ಘೋಷಣೆ ಮಾಡಲಾಗಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ವಿಭಾಗದಲ್ಲಿ ನಿರ್ಮಾಣ ಮತ್ತು ಮೂಲ ಚಾರ್ಜಿಂಗ್ ಸೌಲಭ್ಯಗಳನ್ನು ಸುಧಾರಿಸಲು ಕ್ರಮಕೈಗೊಳ್ಳಲಾಗುತ್ತದಂತೆ. ಜೊತೆಗೆ ಪಾವತಿ ಭದ್ರತಾ ವ್ಯವಸ್ಥೆಯ ಮೂಲಕ ಸಾರ್ವಜನಿಕ ಸಾರಿಗೆಗಾಗಿ ಇ-ಬಸ್‌ಗಳ ಹೆಚ್ಚಿನ ಬಳಕೆಯನ್ನು ಉತ್ತೇಜಿಸಲಾಗುತ್ತದೆ ಎಂದು ಎಂದು ತಿಳಿದುಬಂದಿದೆ.
ಇಷ್ಟೇ ಅಲ್ಲದೆ ರಕ್ಷಣಾ ವಲಯದಲ್ಲಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಲು ಮುಂದಾಗಿದ್ದು, ಈ ಮೂಲಕ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅದರಲ್ಲೂ ರಕ್ಷಣಾ ವಲಯದಲ್ಲಿ ಡೀಪ್‌ಟೆಕ್ (DeepTech) ಅನ್ನು ಬಲಪಡಿಸಲು ಹೊಸ ಪ್ಲ್ಯಾನ್ ಅನ್ನು ಆರಂಭ ಮಡಲಾಗುತ್ತಿದೆ. ಈ ಸಂಬಂಧ ರಾಷ್ಟ್ರೀಯ ಡೀಪ್‌ಟೆಕ್ ಸ್ಟಾರ್ಟ್‌ಅಪ್ ನೀತಿಯ ಕರಡನ್ನು ಕೇಂದ್ರ ಸರ್ಕಾರ ಕಳೆದ ವರ್ಷವೇ ಬಿಡುಗಡೆ ಮಾಡಿತ್ತು.

ಆರ್ & ಡಿ ಕಾರ್ಪಸ್: ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಪಸ್ (Research and Development Corpus) ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಯನ್ನು ಬಲಪಡಿಸಲು ಸಜ್ಜಾಗಿದೆ. ಈ ನಡುವೆ ಭಾರತದ ತಂತ್ರಜ್ಞಾನ-ಬುದ್ಧಿವಂತ ಯುವಕರ ಬೆಳವಣಿಗೆಗೆ ಸಹಾಯ ಮಾಡಲು ಸರ್ಕಾರವು 50 ವರ್ಷಗಳ ವರೆಗೆ ಬಡ್ಡಿ ರಹಿತ ಸಾಲ ನೀಡಲು 1 ಲಕ್ಷ ಕೋಟಿ ರೂಪಾಯಿಗಳ ಕಾರ್ಪಸ್ ಅನ್ನು ಸ್ಥಾಪಿಸಲಿದೆ ಎಂದು ವಿತ್ತ ಸಚಿವೆ ಹೇಳಿದ್ದಾರೆ. ಇದು ಸನ್‌ರೈಸ್ ಡೊಮೇನ್‌ಗಳಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಹೆಚ್ಚಿಸಲು ಖಾಸಗಿ ವಲಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಬಜೆಟ್ ಘೋಷಣೆಯಿಂದಲೇ ಭಾರತದಲ್ಲಿ ಹಾರ್ಡ್‌ವೇರ್ ಮತ್ತು ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಜಾಗತಿಕ ಕಂಪನಿಗಳನ್ನು ಪ್ರಲೋಭನಗೊಳಿಸುವ ಪ್ರಯತ್ನ ಮಾಡಲಾಗಿದೆ. ಅಲ್ಲದೆ ದೇಶದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗಾಗಿ ಬಾಹ್ಯ ಕೈಗಾರಿಕೆಗಳಲ್ಲಿ ಕಂಪನಿಗಳನ್ನು ಆಕರ್ಷಿಸಲು ಸರ್ಕಾರವು ಭಾರತೀಯ ಸೆಮಿಕಂಡಕ್ಟರ್ ಮಿಷನ್ (ISM) ಅನ್ನು ಪುನರುಜ್ಜೀವನಗೊಳಿಸಿದೆ ಎಂದು ಹೇಳಿದ್ದಾರೆ. ಇದರೊಂದಿಗೆ ದೇಶೀಯ ಉತ್ಪಾದನೆಯನ್ನು ಹೆಚ್ಚು ಮಾಡಲು ಹಲವಾರು ಘಟಕಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಸಹ ಮಾಡಲಾಗಿದೆ ಎಂದು ಒತ್ತಿ ಹೇಳಿದ್ದಾರೆ.


Click it and Unblock the Notifications








